ಈ ವಿಷಯದಲ್ಲಿ ಬೆಂಗಳೂರು ವಿಶ್ವಕ್ಕೆ ನಂಬರ್ 1!

ಈ ವಿಷಯದಲ್ಲಿ ಬೆಂಗಳೂರು ವಿಶ್ವಕ್ಕೆ ನಂಬರ್ 1!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಸಂಚಾರಿ ನಿಯಮ ಉಲ್ಲಂಘನೆಯ ಕುರಿತು ಶಾಕಿಂಗ್ ಮಾಹಿತಿ ಹೊರಬಿದ್ದಿದೆ. ವಿಶ್ವದಲ್ಲೇ ಬೆಂಗಳೂರು ರಸ್ತೆ ಸಂಚಾರ ನಿಯಮ ಉಲ್ಲಂಘನೆಯಲ್ಲಿ ಮೊದಲ ಸ್ಥಾನದಲ್ಲಿದೆ ಎಂದರೆ ನೀವು ನಂಬಲೇ ಬೇಕು. ಈ ಬಗ್ಗೆ ಸ್ವತಃ ನಗರ ಸಂಚಾರ ಪೊಲೀಸ್ ವಿಶೇಷ ಆಯುಕ್ತ ಎಂ.ಎ.ಸಲೀಂ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ 2022ರ ಜನವರಿಯಿಂದ ಇಲ್ಲಿಯವರೆಗೆ 96 ಲಕ್ಷ ರಸ್ತೆ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, 174 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ.