ಈಗಿನ ವಾತಾವರಣದಲ್ಲಿ ಮಹಾರಾಷ್ಟ್ರ ಸಚಿವರು ಕರ್ನಾಟಕಕ್ಕೆ ಬರುವುದು ಬೇಡ : ಸಿಎಂ ಬೊಮ್ಮಾಯಿ ಹೇಳಿಕೆ

ಈಗಿನ ವಾತಾವರಣದಲ್ಲಿ ಮಹಾರಾಷ್ಟ್ರ ಸಚಿವರು ಕರ್ನಾಟಕಕ್ಕೆ ಬರುವುದು ಬೇಡ : ಸಿಎಂ ಬೊಮ್ಮಾಯಿ ಹೇಳಿಕೆ

ಹುಬ್ಬಳ್ಳಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಸಂದರ್ಭದಲ್ಲಿ ಮಹಾರಾಷ್ಟ್ರ ಸಚಿವರು ಕರ್ನಾಟಕಕ್ಕೆ ಬರುವುದು ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟ-ಮಹಾರಾಷ್ಟ್ರದ ಜನರ ನಡುವೆ ಸಾಮರಸ್ಯ ಇದೆ. ಈಗಿನ ವಾತಾವರಣದಲ್ಲಿ ಮಹಾರಾಷ್ಟ್ರ ಸಚಿವರು ಕರ್ನಾಟಕಕ್ಕೆ ಬರುವುದು ಬೇಡ. ಗಡಿ ವಿವಾದ ಹೊತ್ತಲ್ಲೇ ಮಹಾರಾಷ್ಟ್ರ ಸಚಿವರು ಕರ್ನಾಟಕಕ್ಕೆ ಬರುವುದು ಸೂಕ್ತವಲ್ಲ ಎಂದರು.

ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಲಿಖಿತವಾಗಿ ತಿಳಿಸಿದ್ದಾರೆ. ಈಗಿನ ವಾತಾವರಣದಲ್ಲಿ ಮಹಾರಾಷ್ಟ್ರಕ್ಕೆ ಬರುವುದು ಬೇಡ. ಅಗತ್ಯ ಕ್ರಮ ಕೈಗೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕರ್ನಾಟಕದ ಪ್ರಕಾರ ಗಡಿ ವಿವಾದ ಮುಗಿದು ಹೋದ ಅಧ್ಯಾಯ. ಆದರೆ ಮಹಾರಾಷ್ಟ್ರ ಕ್ಯಾತೆ ತೆಗೆದು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯದಲ್ಲಿ ಕೇಸರಿಶಾಲೆ ಆರಂಭದ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಪ್ರತ್ಯೇಕ ಕೇಸರಿ ಶಾಲೆಗಳನ್ನು ಆರಂಭಿಸುವ ಬಗ್ಗೆ ನಾನು ಮಾತನಾಡಲ್ಲ. ಮೊದಲು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಮತ್ತು ಗಡಿ ವಿವಾದದ ಮಹಾರಾಷ್ಟ್ರ ಉನ್ನತಾಧಿಕಾರ ಸಮಿತಿಯ ಅಧ್ಯಕ್ಷ ಧೈರ್ಯಶೀಲ್ ಮಾನೆ ಅವರು ಡಿಸೆಂಬರ್ 6 ರಂದು ಮಹಾರಾಷ್ಟ್ರ ಏಕೀಕರಣ ಸಮಿತಿಯ ನಾಯಕರನ್ನು ಭೇಟಿಯಾಗಲಿದ್ದಾರೆ.