ಉಚಿತ ವಿದ್ಯುತ್ ಘೋಷಣೆ, ಶತಮಾನದ ಅತಿದೊಡ್ಡ ಸುಳ್ಳು : ಕಾಂಗ್ರೆಸ್ ಗೆ ಸಚಿವ ಸುನೀಲ್ ಕುಮಾರ್ ತಿರುಗೇಟು

ಉಚಿತ ವಿದ್ಯುತ್ ಘೋಷಣೆ, ಶತಮಾನದ ಅತಿದೊಡ್ಡ ಸುಳ್ಳು : ಕಾಂಗ್ರೆಸ್ ಗೆ ಸಚಿವ ಸುನೀಲ್ ಕುಮಾರ್ ತಿರುಗೇಟು

ಬೆಂಗಳೂರು : ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಜ್ಯದ ಇಂಧನ ಸಚಿವ ವಿ.ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇದು ಶತಮಾನದ ಅತಿದೊಡ್ಡ ಸುಳ್ಳೆಂದು ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಚಿವ ಸುನೀಲ್ ಕುಮಾರ್ 200 ಯುನಿಟ್ವರೆಗೆ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಡಂಗುರ ಸಾರುತ್ತಿದ್ದಾರೆ. ಇದು ಈ ಶತಮಾನದ ಅತಿದೊಡ್ಡ ಸುಳ್ಳಾಗಬಹುದು ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.ತಾವು ಸಿಎಂ ಆಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ 200 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ ಎಂದು ಸಿದ್ದರಾಮಯ್ಯಗೆ ತಿರುಗೇಟು ಸುನೀಲ್ ಕುಮಾರ್ ತಿರುಗೇಟು ನೀಡಿದ್ದಾರೆ.

ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಮಾತನಾಡಿದ್ದ ಡಿಕೆಶಿ ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯವನ್ನು ಸಂಗ್ರಹಿಸಿ ಅದರ ಪ್ರತಿಧ್ವನಿಯಾಗಿ ನಿಮಗೆ ಶಕ್ತಿ ನೀಡಲು, ನಿಮ್ಮ ಬದುಕಿಗೆ ಬೆಳಕು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆಯ ಉದ್ದೇಶವಾಗಿದೆ ಎಂದು ಹೇಳಿದ್ದರು.

ಅಡುಗೆ ಅನಿಲದ ಬೆಲೆ 400 ರಿಂದ 1100 ರು. ಆಗಿದೆ. ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಮೋದಿ ಸರ್ಕಾರ ವಚನ ನೀಡಿತ್ತು. ಯಾರಾದರೂ ರೈತನ ಆದಾಯ ಡಬಲ್ ಆಗಿದೆಯಾ? ಕಳೆದ ಚುನಾವಣೆ ಸಮಯದಲ್ಲಿ ನಿಮ್ಮ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುತ್ತೇವೆ ಎಂದರು. ಸಾಲ ಮನ್ನಾ ಆಗಿದೆಯಾ? 10 ಹೆಚ್ ಪಿ 10 ಗಂಟೆ ವಿದ್ಯುತ್ ನೀಡುತ್ತೇವೆ ಎಂದರು. ನೀಡಿದರಾ? ಬಂಗಾರಪ್ಪ ಅವರ ಕಾಲದಲ್ಲಿ ಕಾಂಗ್ರೆಸ್ ಸರ್ಕಾರ ರೈತರಿಗೆ ಉಚಿತ ವಿದ್ಯುತ್ ನೀಡಲು ಆರಂಭಿಸಿತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ, ನಾನು ಇಂಧಾನ ಸಚಿವನಾಗಿದ್ದಾಗ ರೈತರಿಗೆ ವಿದ್ಯುತ್ ನೀಡುವ ಸಮಯವನ್ನು 6 ರಿಂದ 7 ಗಂಟೆಗೆ ಹೆಚ್ಚಿಸಿದೆವು ಎಂದು ಹೇಳಿದರು.