ಉಜ್ಜಯಿನಿಯ ಮಹಾಕಾಲ ದೇವಸ್ಥಾನದಲ್ಲಿ ರಾಹುಲ್ ಗಾಂಧಿ ವಿಶೇಷ ಪೂಜೆ

ಉಜ್ಜಯಿನಿಯ ಮಹಾಕಾಲ ದೇವಸ್ಥಾನದಲ್ಲಿ ರಾಹುಲ್ ಗಾಂಧಿ ವಿಶೇಷ ಪೂಜೆ

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಪ್ರಸಿದ್ಧ ಮಹಾಕಾಲ ಶಿವನ ದೇವಾಲಯದಲ್ಲಿ ಮಂಗಳವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ವಿಶೇಷ ಪೂಜೆ ಸಲ್ಲಿಸಿದರು. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ಮಧ್ಯಪ್ರದೇಶದ ಪವಿತ್ರ ನಗರವನ್ನು ಪ್ರವೇಶಿಸಿದೆ. ಈ ವೇಳೆ ಉಜ್ಜಯಿನಿಯ ಶಿವನ ದೇವಸ್ಥಾನಕ್ಕೆ ರಾಹುಲ್ ಗಾಂಧಿ ಅವರು ಭೇಟಿ ನೀಡಿದರು. ಬಳಿಕ ಅರ್ಚಕರ ಮಾರ್ಗದರ್ಶನದಲ್ಲಿ ಮಹಾಕಾಲನಿಗೆ ವಿಶೇಷ ಪೂಜೆ ಸಲ್ಲಿಸಿದರು.