ಉಡುಪಿಯಲ್ಲಿ ಹಾಡಹಗಲೇ ಚಾಕು ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಉಡುಪಿಯಲ್ಲಿ ಹಾಡಹಗಲೇ ಚಾಕು ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಡುಪಿ : ಚಾಕು ಇರಿದು ವ್ಯಕ್ತಿಯ ಬರ್ಬರ ಹತ್ಯೆ ಮಾಡಿದ ಘಟನೆ ಇಲ್ಲಿನ ಕಾಪು ಠಾಣಾ ವ್ಯಾಪ್ತಿಯ ಪಾಂಗಾಳ ಎಂಬಲ್ಲಿ ನಡೆದಿದೆ.

ಮೃತನನ್ನು ಶರತ್ ಶೆಟ್ಟಿ (39) ಎಂದು ಗುರುತಿಸಲಾಗಿದೆ. ಜಾಗದ ವ್ಯವಹಾರಕ್ಕೆ ಕೊಲೆ ನಡೆದಿದೆ ಎಂದು ಶಂಕಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇಬ್ಬರು ದುಷ್ಕರ್ಮಿಗಳು ಶರತ್ ಮೇಲೆ ಚಾಕುವಿನಿಂದ ಇರಿದು ಎಸ್ಕೇಪ್ ಆಗಿದ್ದರು. ಕೂಡಲೇ ಶರತ್ ನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಶರತ್ ಮೃತಪಟ್ಟಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಸಿಸಿಟಿವಿ ದೃಶ್ಯದ ಮೇರೆಗೆ ಆರೋಪಿಗಳನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.