ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ, ವಿಜಯನಗರ ರಾಜಧಾನಿಯಾಗಲಿದೆ : ಸಚಿವ ಆನಂದ್ ಸಿಂಗ್ ಅಚ್ಚರಿಯ ಹೇಳಿಕೆ
ಹೊಸಪೇಟೆ : ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯವಾದ್ರೆ, ವಿಜಯನಗರ ಜಿಲ್ಲೆ ರಾಜಧಾನಿಯಾಗಲಿದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಭಟ್ರಳ್ಳಿ ಆಂಜನೇಯ ದೇಗುಲದ ಬಳಿ ಗುರುವಾರ ಬಿಜೆಪಿ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಜಯನಗರ ಸಾಮ್ರಾಜ್ಯ ನೆಲದ ಗುಣವೇ ವಿಶೇಷವಾಗಿದೆ. ಆದ್ದರಿಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ನೂತನ ವಿಜಯನಗರ ಜಿಲ್ಲೆ ರಾಜಧಾನಿಯಾಗುವ ಸಾಧ್ಯತೆಯಿದೆ ಎಂದು ಹೇಳಿದರು.
ವಿಜಯನಗರ ನೆಲದ ಗುಣವೇ ವಿಶೇಷವಾಗಿದೆ. ಗತವೈಭವ ಸಾರಿದ ನಾಡು ಇದು. ಇಲ್ಲಿ ಕೈಗೊಂಡ ತೀರ್ಮಾನಗಳು, ಯಾವುದೇ ಯೋಜನೆಗಳು ತಪ್ಪಿದ ಇತಿಹಾಸವೇ ಇಲ್ಲ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ನೂತನ ವಿಜಯನಗರ ಜಿಲ್ಲೆ ರಾಜಧಾನಿಯಾಗಲಿದೆ ಎಂದಿದ್ದಾರೆ.