ಉತ್ತರ ಕರ್ನಾಟಕ ಭಾಗಕ್ಕೆ ಕೊಡುಗೆ ಏನು? ಇಲ್ಲಿದೆ ವಿವರ

ಉತ್ತರ ಕರ್ನಾಟಕ ಭಾಗಕ್ಕೆ ಕೊಡುಗೆ ಏನು? ಇಲ್ಲಿದೆ ವಿವರ

ಹಾವೇರಿ, ಫೆಬ್ರವರಿ, 17: ಸಿಎಂ ಬಸವರಾಜ ಬೊಮ್ಮಾಯಿ ಅವರು 2ನೇ ಬಾರಿ ಬಜೆಟ್‌ ಮಂಡಿಸಿದ್ದು, ತವರು ಕ್ಷೇತ್ರಕ್ಕೆ ಏನೆಲ್ಲ ಕೊಡುಗೆಯನ್ನು ನೀಡಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ಮನೆ- ಮನೆಗೆ ಆರೋಗ್ಯ ಯೋಜನೆಯಡಿ ಪ್ರತಿ ಹಳ್ಳಿಯಲ್ಲಿ ವರ್ಷದಲ್ಲಿ ಎರಡು ಬಾರಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗುವುದು. ಸ್ಥಳೀಯ ಕೇಂದ್ರಗಳ ಮೂಲಕ ಇದನ್ನು ಆಯೋಜನೆ ಮಾಡಲಾಗುತ್ತದೆ.

ಆರಂಭದಲ್ಲಿಯೇ ಮಾರಕ ಖಾಯಿಲೆಗಳನ್ನು ಪತ್ತೆ ಮಾಡಿ ಚಿಕಿತ್ಸೆ ಕೊಡಲು ಈ ಯೋಜನೆಯನ್ನು ರೂಪಿಸಲಾಗುವದು. ಇದರ ಜೊತೆಗೆ ದೀರ್ಘಕಾಲದ ಖಾಯಿಲೆಗಳಿಂದ ಬಳಲುತ್ತಿರುವವರ ಮನೆ ಬಾಗಿಲಿಗೆ ಔಷಧಿ ತಲುಪಿಸುವ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಂದು ಘೋಷಣೆ ಮಾಡಿದರು.

ಉತ್ತರ ಕರ್ನಾಟಕಕ್ಕೆ ಕೊಡುಗೆಗಳು

1. ಹಾವೇರಿ ಜಿಲ್ಲೆ ಶಿಗ್ಗಾಂವ್ ತಾಲೂಕಿನ ಬಂಕಾಪುರದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್‌ ಅನ್ನು ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​​ ಆಗಿ ಉನ್ನತೀಕರಣ ಮಾಡಲಾಗುತ್ತದೆ.

3. ಶಿಕ್ಷಣ ಹಾಗೂ ಆರೋಗ್ಯ ಸೇವೆಗಳು ಎಲ್ಲ ವರ್ಗಗಗಗಳು ಹಾಗೂ ಎಲ್ಲ ಪ್ರದೇಶಗಳ ಜನರಿಗೆ ಸುಲಭವಾಗಿ ದೊರೆಯುವಂತೆ ಮಾಡುವುದು ನಮ್ಮ ಆದ್ಯತೆಯಾಗಿದೆ.

3. ಹಾಗೆಯೇ ಈ ಬಾರಿಯ ಬಜೆಟ್‌ನಲ್ಲಿ ಪಶುಸಂಗೋಪನೆ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಬಳ್ಳಾರಿ, ಹಾವೇರಿಯಲ್ಲಿ ಬೃಹತ್ ಡೈರಿಯನ್ನು ಸ್ಥಾಪಿಸಲಾಗುತ್ತದೆ. ಈ ಮೂಲಕ ಇಲ್ಲಿನ ಹೈನುಗಾರಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಲು ನಿರ್ಧರಿಸಲಾಗಿದೆ.

4. ರಾಜ್ಯದ 9 ಲಕ್ಷ ಹಾಲು ಉತ್ಪಾದಕರಿಗೆ 1,067 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ನೇರ ನಗದು ಪಾವತಿ ಮೂಲಕ ವರ್ಗಾವಣೆ ಮಾಡಲಾಗಿದೆ. ಅಲ್ಲದೆ, ಹೈನುಗಾರಿಕೆಯನ್ನು ಅಭಿವೃದ್ಧಿಪಡಿಸಲು ಹಾವೇರಿಯಲ್ಲಿ 1 ಲಕ್ಷ ಲೀ. ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆಗೆ 90 ಕೋಟಿ ರೂಪಾಯಿ ಅನುದಾನ ನೀಡಲಾಗುವುದು.

5. ಪ್ರಸಕ್ತ ವರ್ಷದಲ್ಲಿ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಲು, ಬಳ್ಳಾರಿ ಜಿಲ್ಲೆಯಲ್ಲಿ ಪ್ರತಿನಿತ್ಯ 2 ಲಕ್ಷ ಲೀ. ಹಾಲು ಸಂಸ್ಕರಣಾ ಸಾಮರ್ಥ್ಯದ ಮೆಗಾ ಡೈರಿಯನ್ನು ಸ್ಥಾಪಿಸಲಾಗುತ್ತದೆ. 100 ಕೋಟಿ ರೂಪಾಯಿ ವೆಚ್ಚದಲ್ಲಿ ಮೆಗಾ ಡೈರಿ ಸ್ಥಾಪಿಸಲಾಗುವುದು ಎಂದು ಮಾಹಿತಿ ನೀಡಿದರು.

6. ಉತ್ತರ ಕರ್ನಾಟಕ ಭಾಗದಲ್ಲಿ ಮೀನುಗಾರಿಕೆಯನ್ನು ಉತ್ತೇಜಿಸಲು ಹಾವೇರಿ ಜಿಲ್ಲೆಯಲ್ಲಿ ಹೊಸದಾಗಿ ಮೀನುಮರಿ ಉತ್ಪಾದನಾ ಮತ್ತು ಪಾಲನಾ ಕೇಂದ್ರವನ್ನು ಸ್ಥಾಪಿಸಲಾಗುವುದು. ಸಾರ್ವಜನಿಕರಿಗೆ ಗುಣಮಟ್ಟದ ಮೀನು ಉತ್ಪನ್ನಗಳನ್ನು ಪೂರೈಸಲು ಪರಿಸರಸ್ನೇಹಿ ತ್ರಿಚಕ್ರ ಮೀನು ಮಾರಾಟ ವಾಹನಗಳನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ನೀಡಲಾಗುತ್ತದೆ.

7. ಸೀಗಡಿ ಉತ್ಪನ್ನಗಳ ರಫ್ತನ್ನು ಪ್ರೋತ್ಸಾಹಿಸಲು ಕೇಂದ್ರ ಆಯವ್ಯಯದಲ್ಲಿ ರಫ್ತು ಸುಂಕವನ್ನು ಕಡಿಮೆ ಮಾಡಲಾಗಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸೀಗಡಿ ಕೃಷಿ ಕ್ಲಸ್ಟರ್‌ಗಳನ್ನು ಸ್ಥಾಪಿಸಲಾಗುವುದು ಎಂದು ಘೋಷಣೆ ಮಾಡಿದರು. ಹೀಗೆ ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗದ ಜನರಿಗೆ ಕೊಡುಗೆಯನ್ನು ನೀಡಿದ್ದಾರೆ.