ಉತ್ತರ ಪ್ರದೇಶದಲ್ಲಿ ಬಸ್-ಟ್ರಕ್ ನಡುವೆ ಡಿಕ್ಕಿ: 6 ಮಂದಿ ಸ್ಥಳದಲ್ಲೇ ಸಾವು, ಕೆಲವರ ಸ್ಥಿತಿ ಗಂಭೀರ
ಉತ್ತರ ಪ್ರದೇಶ: ಉತ್ತರ ಪ್ರದೇಶದ ಬಹ್ರೈಚ್‌ನ ತಪ್ಪೆ ಸಿಪಾದಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಲಕ್ನೋ-ಬಹ್ರೈಚ್ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಬಸ್-ಟ್ರಕ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.