ಉತ್ತರಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ಆಗಬೇಕು: ಬಿ.ಎಸ್ ಯಡಿಯೂರಪ್ಪ

ಬೆಳಗಾವಿ: ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇದಕ್ಕೂ ಮುನ್ನ ಸಾವರ್ಕರ್ ಸೇರಿದಂತೆ 7 ಮಹನೀರ ಭಾವಚಿತ್ರಗಳನ್ನು ರಾಜ್ಯ ಸರ್ಕಾರ ಅನಾವರಣ ಮಾಡಿದೆ.ವಿಧಾನಸಭೆ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ನೀಡಲಾಗಿತ್ತು.
ಉತ್ತರಕರ್ನಾಟಕದ ಸಮಸ್ಯೆಗಳ ಬಗ್ಗೆ ಸದನದಲ್ಲಿ ಚರ್ಚೆ ಆಗಬೇಕು ಎಂದು ಸುವರ್ಣಸೌಧದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಉತ್ತರಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಆಗಬೇಕು. ಇದಕ್ಕೆ ಕಾಂಗ್ರೆಸ್ ಸದಸ್ಯರು ಸುಗಮ ಕಲಾಪಕ್ಕೆ ಸಹಕಾರ ನೀಡಬೇಕು ಎಂದು ಹೇಳಿದ್ದಾರೆ.
ಇತ್ತ, ಬೆಳಗಾವಿ ಸುವರ್ಣಸೌಧದಲ್ಲಿ ಸಾರ್ವಕರ್ ಫೋಟೋ ಅಳವಡಿಕೆ ವಿರೋಧಿಸಿ ಸುವರ್ಣಸೌಧದ ಮೆಟ್ಟಿಲುಗಳ ಮೇಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದಾರೆ. ಸುವರ್ಣ ಸೌಧದಲ್ಲಿ ಸಾರ್ವಕರ್ ಫೋಟೋ ಅಳವಡಿಕೆಗೆ ನಮ್ಮ ವಿರೋಧವಿದೆ. ಬ್ರಿಟಿಷರ ಬಳಿ ಕ್ಷಮಾಪಣೆ ಕೇಳಿದ ವ್ಯಕ್ತಿಯ ಫೋಟೋವನ್ನು ಸುವರ್ಣಸೌಧದಲ್ಲಿ ಅಳವಡಿಕೆಗೆ ನಮ್ಮ ವಿರೋಧವಿದೆ ಎಂದು ಕಾಂಗ್ರೆಸ್ ನಾಯಕರು ಧರಣಿ ನಡೆಸುತ್ತಿದ್ದಾರೆ.