ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ; ಸಂಜೆ 4.30ಕ್ಕೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿ

ಬೆಂಗಳೂರು: ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ ನೋಟ್ ನಲ್ಲಿ ಪ್ರಬಾವಿ ನಾಯಕ ಹೆಸರು ಇದ್ದು, ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಡೆತ್ ನೋಟ್ ನಲ್ಲಿ ಶಾಸಕ ಅರವಿಂದ ಲಿಂಬಾಳಿ , ಗೋಪಿ ಕೆ. ಸೋಮಯ್ಯ , ಜಿ ರಮೇಶ್ ರೆಡ್ಡಿ , ಜಯರಾಮ್ ರೆಡ್ಡಿ, ರಾಘವ್ ಭಟ್ ಹೆಸರು ಉಲ್ಲೇಖಿಸಲಾಗಿದ್ದು, ಎಫ್ ಐ ಆರ್ ದಾಖಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಂಜೆ 4.30ಕ್ಕೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ಬೆಂಗಳೂರು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಲಿದ್ದಾರೆ. ಡೆತ್ ನೋಟ್ ನಲ್ಲಿ ಉದ್ಯಮಿ ಪ್ರದೀಪ್ ಅರವಿಂದ ಲಿಂಬಾವಳಿ ಹೆಸರು ಉಲ್ಲೇಖಿಸಿದ್ದರಉ. ಹೀಗಾಗಿ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಆರು ಜನರ ವಿರುದ್ಧ ಎಫ್ ಐಆರ್ ಪೊಲೀಸರು ದಾಖಲಿಸಿದ್ದರು. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವ ಸಾಧ್ಯತೆ ಇದೆ.