ಉದ್ಯೋಗ ಕಾಯಮಾತಿಗೆ ಒತ್ತಾಯ : ನಾಳೆಯಿಂದ ರಾಜ್ಯಾದ್ಯಂತ ಪೌರಕಾರ್ಮಿಕರ ಮುಷ್ಕರ
ಬೆಂಗಳೂರು : ಉದ್ಯೋಗ ಕಾಯಮಾತಿಗೆ ಒತ್ತಾಯಿಸಿ ರಾಜ್ಯಾದ್ಯಂತ ನಾಳೆಯಿಂದ ಪೌರಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ಮುಂದಾಗಿದ್ದಾರೆ.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆಯಡಿ ಕೆಲಸ ಮಾಡುತ್ತಿರುವ ತ್ಯಾಜ ವಿಲೇವಾರಿ ವಾಹನ ಚಾಲಕರು ಹಾಗೂ ನೀರು ಸರಬರಾಜು ಸಹಾಯಕರು ಉದ್ಯೋಗ ಕಾಯಮಾತಿಗೆ ಒತ್ತಾಯಿಸಿ ಫೆ.1 ರಿಂದ ಕೆಲಸ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ, ತಹಸೀಲ್ದಾರ್ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಿದ್ದಾರೆ.
ಪೌರಕಾರ್ಮಿಕರನ್ನು ಕಾಯಂಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರ ಕಸ ವಿಲೇವಾರಿ ವಾಹನ ಚಾಲಕರು, ಸಹಾಯಕರು, ನೀರು ಪೂರೈಕೆದಾರರನ್ನು ಕಡೆಗಣಿಸಿದೆ. ಜೊತೆಗೆ ಲೋಡರ್ಸ್, ಕ್ಲೀನರ್ಸ್, ಡಾಟಾ ಎಂಟ್ರಿ ಅಪರೇಟರ್ಸ್, ಸ್ಯಾನಿಟರಿ ಸೂಪರ್ ವೈಸರ್ ಗಳನ್ನು ಕೂಡ ನೇರ ನೇಮಕಾತಿಗೆ ಪರಿಗಣಿಸಿಲ್ಲ ಎಂದು ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ. ನಾಗಣ್ಣಗೌಡ ಹೇಳಿದ್ದಾರೆ.