ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನಾಳೆ ಬೆಂಗಳೂರಿನಲ್ಲಿ 'ಉದ್ಯೋಗ ಮೇಳ' ಆಯೋಜನೆ

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ನಾಳೆ ಬೆಂಗಳೂರಿನಲ್ಲಿ 'ಉದ್ಯೋಗ ಮೇಳ' ಆಯೋಜನೆ

ಬೆಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನಿರುದ್ಯೋಗಿ ಯುವಕ / ಯುವತಿಯರಿಗೆ ಜನವರಿ 21 ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ನಾಳೆ ಬೆಳಗ್ಗೆ 10.00 ಗಂಟೆಯಿಂದ ಅಪರಾಹ್ನ 4.00 ಗಂಟೆಯ ವರೆಗೆ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿ, ಏಷ್ಯಾಟಿಕ್ ಕಟ್ಟಡ, 2ನೇ ಮಹಡಿ, ಕೆ.ಜಿ.ರಸ್ತೆ, ಬೆಂಗಳೂರು-09 ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಪಿ.ಯು.ಸಿ, ಐ.ಟಿ.ಐ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 35 ವರ್ಷಗಳ ವಯೋಮಿತಿಯೊಳಗಿರುವ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಭಾಗವಹಿಸಿ ಈ ಸದಾವಕಾಶವನ್ನು ಬಳಸಿಕೊಳ್ಳಬಹುದು. ಸುಮಾರು 10 ಕ್ಕೂ ಹೆಚ್ಚು ಕಂಪನಿಗಳು ಈ ಮೇಳದಲ್ಲಿ ಭಾಗವಹಿಸುತ್ತಿದ್ದು, ಅಭ್ಯರ್ಥಿಗಳು ಸ್ವ-ವಿವರಗಳ (ಬಯೋಡಾಟಾ) ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22374582 ಮೂಲಕ ಸಂಪರ್ಕಿಸಬಹುದು ಎಂದು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.