ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 1 ಲಕ್ಷ ಹುದ್ದೆಗಳ ಭರ್ತಿಗೆ ಮುಂದಾದ ರಾಜ್ಯ ಸರ್ಕಾರ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 1 ಲಕ್ಷ ಹುದ್ದೆಗಳ ಭರ್ತಿಗೆ ಮುಂದಾದ ರಾಜ್ಯ ಸರ್ಕಾರ

ಬೆಳಗಾವಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ ಅತ್ಯಗತ್ಯವಿರುವ 1 ಲಕ್ಷ ಹುದ್ದೆಗಳ ಭರ್ತಿಗೆ ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು. 12 ಸಾವಿರ ಸಫಾಯಿ ಕರ್ಮಚಾರಿಗಳ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದಲ್ಲಿ ಒಟ್ಟು 7 ಲಕ್ಷ 60 ಸಾವಿರ ಮಂಜೂರಾಗಿವೆ. ಇದರಲ್ಲಿ 5 ಲಕ್ಷ 11 ಸಾವಿರ ಹುದ್ದೆಗಳಲ್ಲಿ ನೌಕರರು ಕೆಲಸ ನಿರ್ವಹಿಸುತ್ತಿದ್ದಾರೆ. 2 ಲಕ್ಷ 50 ಸಾವಿರ ಹುದ್ದೆಗಳು ಖಾಲಿ ಇವೆ ಎಂದಿದ್ದಾರೆ.