ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರವೇ ಜಲಸಂಪನ್ಮೂಲ ಇಲಾಖೆಗೆ 400 ಎಂಜಿನಿಯರ್ ನೇಮಕ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಚಿವ ಗೋವಿಂದ ಕಾರಜೋಳ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಜಲಸಂಪನ್ಮೂಲ ಇಲಾಖೆಯಲ್ಲಿ 400 ಜನರ ನೇಮಕಕ್ಕೆ ಅನುಮತಿ ನೀಡಲಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲಸಂಪನ್ಮೂಲ ಇಲಾಖೆಯಲ್ಲಿ 300 ಸಹಾಯಕ ಎಂಜಿನಿಯರ್, 100 ಕಿರಿಯ ಎಂಜಿನಿಯರ್ ನೇಮಕ ಮಾಡಿಕೊಳ್ಳಲಾಗುವುದು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಹಣಕಾಸು ಇಲಾಖೆಯ ಜೊತೆಗೆ ಮಾತನಾಡಿದ್ದೇನೆ. 400 ಮಂದಿಯ ನೇಮಕಕ್ಕೆ ಅನುಮತಿ ನೀಡಿದ್ದಾರೆ. 300 ಸಹಾಯಕ ಎಂಜಿನಿಯರ್, 100 ಕಿರಿಯ ಎಂಜಿನಿಯರ್ ನೇಮಕ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.