ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವರಿಂದ ಗುಡ್ ನ್ಯೂಸ್ : ಶೀಘ್ರವೇ 2 ಸಾವಿರ ಚಾಲಕರ ನೇಮಕ
ಬೆಳಗಾವಿ :ಉದ್ಯೋಗಾಕಾಂಕ್ಷಿಗಳಿಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಗ್ರವೇ ರಾಜ್ಯದ ವಿವಿಧ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ 2,000 ಚಾಲಕ ಹುಹದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಸಿದ್ದು ಸವದಿ ಅವರ ಪ್ರಶ್ನೆಗೆ ಉತ್ತರಿಸಿದ ಸಾರಿಗೆ ಸಚಿವ ಬಿ.ಶ್ರೀರಾಮುಲು, ರಾಜ್ಯದ ವಿವಿಧ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ 2 ಸಾವಿರ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಚಾಲಕರಿಗೆ ಈವರೆಗೆ ತರಬೇತಿ ಅವಧಿಯಲ್ಲಿ 10 ಸಾವಿರ ರೂ.ನೀಡಲಾಗುತ್ತಿತ್ತು. ಆ ಮೊತ್ತವನ್ನು 20 ಸಾವಿರ ರೂ.ಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ.