ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `KPSC' ಕಿರಿಯ ಎಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `KPSC' ಕಿರಿಯ ಎಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕೆಪಿಎಸ್ ಸಿ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಜಲಸಂಪನ್ಮೂಲ ಇಲಾಖೆಯ 169 ಕಿರಿಯ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜಲಸಂಪನ್ಮೂಲ ಇಲಾಖೆಯ ಒಟ್ಟು 166 (ಸಿವಿಲ್) ಹಾಗೂ 03 (ಮೆಕ್ಯಾನಿಕಲ್) ಕಿರಿಯ ಎಂಜಿನಿಯರ್ ಗಳ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲಾಗುವುದು ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹುದ್ದೆಗಳ ಭರ್ತಿಗೆ ಅರ್ಜಿ ಪ್ರಕ್ರಿಯೆ ಅ.19 ರಿಂದ ಆರಂಭವಾಗಲಿದ್ದು, ನವೆಂಬರ್ 17 ಕೊನೆಯ ದಿನವಾಗಿದೆ. ಮುರು ಹಂತಗಳಲ್ಲಿ ಆನ್ ಲೈನ್ ಮೂಲಕ ಅರ್ಜಿ ಹಾಗೂ ಶುಲ್ಕ ಪಾವತಿ ಮಾಡಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್ ಸೈಟ್ www.kpsc.com ಗೆ ಭೇಟಿ ನೀಡಬಹುದು