ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಪೌರಕಾರ್ಮಿಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಪೌರಕಾರ್ಮಿಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ತುಮಕೂರು : ಪಾವಗಡ ಪುರಸಭೆಯಲ್ಲಿ ಖಾಲಿ ಇರುವ ನೇರ ನೇಮಕಾತಿ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳನ್ನು ಸೂಚನೆಯ ವಿವಿರವನ್ನು ದಿನಾಂಕ 13-01-2023 ರಿಂದ 13-02-2023 ರವರೆಗೆ ಜಿಲ್ಲಾಧಿಕಾರಿಗಳ ಕಛೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ, ತುಮಕುರು ಜಿಲ್ಲೆ ಇಲ್ಲಿ ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪಡೆಯಬಹುದಾಗಿದೆ.

ಭರ್ತಿ ಮಾಡಿದ ನಮೂನೆಗಳನ್ನು ಎಲ್ಲಾ ದಾಖಲೆಗಳೊಂದಿಗೆ ದಿನಾಂಕ 13-02-2023 ರೊಳಗೆ ಜಿಲ್ಲಾಧಿಕಾರಿಗಳ ಕಛೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ, ತುಮಕೂರು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ - 26

ಕನಿಷ್ಠ ವಿದ್ಯಾರ್ಹತೆ/ಅರ್ಹತೆ

  1. ವಿದ್ಯಾರ್ಹತೆ ಅನ್ವಯಿಸುವುದಿಲ್ಲ
  2. ಕನ್ನಡ ಮಾತನಾಡಲು ಬರಬೇಕು
  3. ತುಮಕೂರು ಜಿಲ್ಲೆಯ ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪೌರಕಾರ್ಮಿಕ ಹುದ್ದೆಯಲ್ಲಿ ಹಾಲಿ ನೇರಪಾವತಿ, ಕ್ಷೇಮಾಭಿವೃದ್ಧಿ ಪೌರಕಾರ್ಮಿಕ ಅಥವಾ ದಿನಗೂಲಿ ಅಥವಾ ಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಹೊರಗುತ್ತಿಗೆ ಅಥವಾ ಲೋಡರ್ಸ್ ಅಥವಾ ಕ್ಲೀನರ್ ಆಧಾರದಲ್ಲಿ 2 ವರ್ಷಗಳಿಮದ ಕಡಿಮೆಯಿಲ್ಲದ ನಿರಂತರವಾಗಿ ಕೆಲಸ ನಿರ್ವಹಿಸುತ್‌ಇತರುವ ಹಾಗೂ ಈ ನಿಯಮಗಳ ಪ್ರಾರಂಭದ ದಿನಾಂಕದಿಂದಲು ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಆದ್ಯತೆ.

ಗರಿಷ್ಠ ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 55 ವರ್ಷದೊಳಗಿರಬೇಕು.

ವೇತನ ಶ್ರೇಣಿ :

17000-28950 ರೂ.ವರೆಗೆ