ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಆರೋಗ್ಯ-ಕುಟುಂಬ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಆರೋಗ್ಯ-ಕುಟುಂಬ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ದಾವಣಗೆರೆ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಫಾರ್ಮಸಿ ಅಧಿಕಾರಿ ಮತ್ತು ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

16 ಫಾರ್ಮರ್ಸಿ ಅಧಿಕಾರಿಗಳು ಹಾಗೂ 1 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ತಾತ್ಕಾಲಿಕವಾಗಿ ಹೊರಗುತ್ತಿಗೆ ಮೇಲೆ ನೇಮಕ ಮಾಡಿಕೊಳ್ಳಲು ಜ.17 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಸಂದರ್ಶನ ನಡೆಸಲಾಗುವುದು.

ಅರ್ಹ ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಮೂಲ ದಾಖಲೆಗಳು ಮತ್ತು ಪ್ರಮಾಣ ಪತ್ರಗಳೊಂದಿಗೆ ಹಾಗೂ ಒಂದು ಸೆಟ್ ದೃಢೀಕೃತ ಜೆರಾಕ್ಸ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.