ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಫೆ. 17 ರಂದು ಬಳ್ಳಾರಿಯಲ್ಲಿ ಉದ್ಯೋಗ ಮೇಳ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಫೆ. 17 ರಂದು ಬಳ್ಳಾರಿಯಲ್ಲಿ ಉದ್ಯೋಗ ಮೇಳ

ಳ್ಳಾರಿ : ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ ಅಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಶ್ರೀಮತಿ ಉಗಮದೇವಿ ಭವರ್‍ಲಾಲ್ ನಾಹರ್ ಥಿಯೋಸಾಫಿಕಲ್ ಮಹಿಳಾ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಫೆ.17ರಂದು ಬೆಳಗ್ಗೆ 10ಕ್ಕೆ ಹೊಸಪೇಟೆ ನಗರದ ಹಂಪಿ ರಸ್ತೆಯ ಶ್ರೀಮತಿ ಉಗಮದೇವಿ ಭವರ್‍ಲಾಲ್ ನಾಹರ್ ಥಿಯೋಸಾಫಿಕಲ್ ಮಹಿಳಾ ಮಹಾವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳದಲ್ಲಿ ಸುಮಾರು 15ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವರು. ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಮೂಲ ಆಧಾರ್ ಕಾರ್ಡ್ ಪ್ರತಿ ಮತ್ತು 10 ಸ್ವ-ವಿವರ ಪ್ರತಿಗಳೊಂದಿಗೆ ಭಾಗವಹಿಸಬಹುದು.

ವಿದ್ಯಾರ್ಹತೆ: ಎಸ್‍ಎಸ್‍ಎಲ್‍ಸಿ, ಪಿಯುಸಿ, ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪೆÇ್ಲೀಮಾ, ಬಿ.ಇಡಿ, ಬಿಎಸ್ಸಿ ನಸಿರ್ಂಗ್ (ಎಎನ್‍ಎಂ, ಜಿಎನ್‍ಎಂ) ವಿದ್ಯಾರ್ಹತೆ ಹೊಂದಿರಬೇಕು.

ಹೆಚ್ಚಿನ ಮಾಹಿತಿಗಾಗಿ ತಾಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9886545955, 7892971984, 9091692898, 8904213400 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.