ಉದ್ಯೋಗಿಗಳಿಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಒತ್ತಾಯಿಸುವಂತಿಲ್ಲ: ದೆಹಲಿ ಹೈಕೋರ್ಟ್

ಉದ್ಯೋಗಿಗಳಿಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಒತ್ತಾಯಿಸುವಂತಿಲ್ಲ: ದೆಹಲಿ ಹೈಕೋರ್ಟ್

ವದೆಹಲಿ: ಉದ್ಯೋಗಿಗಳಿಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಉದ್ಯೋಗದಾತರು ಒತ್ತಾಯಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ.

ಲಸಿಕೆಯನ್ನು ಬಲವಂತವಾಗಿ ಹಾಕಿಸಿಕೊಳ್ಳದೇ ಬೋಧನೆ ಮತ್ತು ಇತರ ಜವಾಬ್ದಾರಿಗಳನ್ನು ನಿರ್ವಹಿಸಲು ಅನುಮತಿ ಕೋರಿ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಪ್ರತಿಭಾ ಎಂ.ಸಿಂಗ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಸೇವಾ ಸೌಲಭ್ಯಗಳಿಗಾಗಿ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಪ್ರಾತಿನಿಧ್ಯ ಸಲ್ಲಿಸಲು ಅವಕಾಶ ನೀಡುವ ಮೂಲಕ ಅರ್ಜಿದಾರರಿಗೆ ಪೀಠವು ಪರಿಹಾರವನ್ನು ನೀಡಿತು ಮತ್ತು 30 ದಿನಗಳಲ್ಲಿ ಅದರ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಸೂಚಿಸಿತು.

ಈ ಹಿಂದೆ, ಜಾಕೋಬ್ ಪುಲಿಯೆಲ್ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ, ತನ್ನ ಸ್ವಂತ ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾವುದೇ ವೈದ್ಯಕೀಯ ಚಿಕಿತ್ಸೆ ತೆಗೆದುಕೊಳ್ಳಲು ನಿರಾಕರಿಸುವುದು ವ್ಯಕ್ತಿಯ ಹಕ್ಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು.

ದೆಹಲಿ ಸರ್ಕಾರದ ಶಿಕ್ಷಣ ನಿರ್ದೇಶನಾಲಯದ ಅಡಿಯಲ್ಲಿ ಗೌತಮ್ ಪುರಿಯ ನ್ಯೂ ಉಸ್ಮಾನ್‌ಪುರದ ಸರ್ಕಾರಿ ಬಾಲಕಿಯರ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಇತಿಹಾಸ ವಿಷಯವನ್ನು ಬೋಧಿಸುವ ಶಿಕ್ಷಕಿ 2021 ರಲ್ಲಿ ಈ ಸಂಬಂಧ ನ್ಯಾಯಾಲಯದ ಮೊರೆ ಹೋಗಿದ್ದರು ಮತ್ತು ಈಗ ಲಸಿಕೆ ಹಾಕಿಸಿಕೊಂಡಿದ್ದಾರೆ.