ಉಪನೋಂದಣಾಧಿಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಉಪನೋಂದಣಾಧಿಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು : ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸಹಿತ ರಾಜ್ಯದ ವಿವಿಧೆಡೆ ಉಪನೋಂದಣಾಧಿಕಾರಿಗಳ ಕಚೇರಿ ಮೇಲೆ ಗುರುವಾರ ಲೋಕಾಯುಕ್ತ ದಾಳಿ ನಡೆಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿ ಯಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ರಾತ್ರಿವರೆಗೂ ಕೆಲವೆಡೆ ದಾಳಿ ಮುಂದುವರಿದಿತ್ತು.

ಹಿರಿಯ ಉಪನೋಂದಣಾಧಿಕಾರಿಗಳು ಮತ್ತು ವಿವಾಹ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ನಡೆಯುತ್ತಿರುವ ಅಕ್ರಮಗಳು ಮತ್ತು ಭ್ರಷ್ಟಾಚಾರದ ಬಗ್ಗೆ ಬಂದಂತಹ ದೂರುಗಳನ್ನು ಆಧರಿಸಿ ಈ ದಾಳಿ ನಡೆಸಲಾಗಿದೆ.

ಲೋಕಾಯುಕ್ತ ಕಚೇರಿಯ ಡಿವೈಎಸ್ಪಿ, ಇನ್ಸ್ಪೆಕ್ಟರ್, ನೇತೃತ್ವದಲ್ಲಿ ಈ ದಾಳಿ ನಡೆದಿದೆ.
ಲೋಕಾಯುಕ್ತರ ದಾಳಿ ವೇಳೆ ಕೆಲವು ಕಚೇರಿಗಳಲ್ಲಿ ಹಣ ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾದ ಆರೋಪದ ಮೇಲೆ ಕೆಲವು ಸಬ್ ರಿಜಿಸ್ಟರ್
ಮತ್ತು ಮಧ್ಯವರ್ತಿಗಳ ಮೇಲೆ ಎಫ್ ಐ ಆರ್ ಸಹ ದಾಖಲಾಗಿದೆ.

ಬೆಂಗಳೂರು : ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸಹಿತ ರಾಜ್ಯದ ವಿವಿಧೆಡೆ ಉಪನೋಂದಣಾಧಿಕಾರಿಗಳ ಕಚೇರಿ ಮೇಲೆ ಗುರುವಾರ ಲೋಕಾಯುಕ್ತ ದಾಳಿ ನಡೆಸಲಾಗಿದೆ.