ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ

ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ

ಮೈಸೂರು: ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಇಲ್ಲಿನ ಪುರಭವನದ ಮುಂಭಾಗ ಬುಧವಾರ ಪ್ರತಿಭಟನೆ ನಡೆಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಸೇರಿದ ಪ್ರತಿಭಟನಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪದೇ ಪದೇ ಎಂಇಎಸ್ ಕಾರ್ಯಕರ್ತರು ಕನ್ನಡಿಗರ ಮೇಲೆ ದೌರ್ಜನ್ಯ ಎಸಗುತ್ತಿದ್ದರೂ ಸರ್ಕಾರ ಸುಮ್ಮನಿರುವುದು ಏಕೆ ಎಂದು ಪ್ರಶ್ನಿಸಿದರು. ನಂತರ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು