ಎಎಪಿ ನಾಯಕ 'ಸತ್ಯೇಂದ್ರ ಜೈನ್'ಗೆ ಬಿಗ್ ಶಾಕ್ ; ಜಾಮೀನು ಅರ್ಜಿ ಮತ್ತೆ ತಿರಸ್ಕೃತ

ಎಎಪಿ ನಾಯಕ 'ಸತ್ಯೇಂದ್ರ ಜೈನ್'ಗೆ ಬಿಗ್ ಶಾಕ್ ; ಜಾಮೀನು ಅರ್ಜಿ ಮತ್ತೆ ತಿರಸ್ಕೃತ

ವದೆಹಲಿ : ದೆಹಲಿ ಸರ್ಕಾರದ ಸಚಿವ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಅವರಿಗೆ ದೆಹಲಿ ನ್ಯಾಯಾಲಯದಿಂದ ದೊಡ್ಡ ಹೊಡೆತ ಬಿದ್ದಿದ್ದು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರ ಜಾಮೀನು ಅರ್ಜಿಯನ್ನ ನ್ಯಾಯಾಲಯ ತಿರಸ್ಕರಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಚಿವ ಸತ್ಯೇಂದ್ರ ಜೈನ್ ಮತ್ತು ಇತರ ಇಬ್ಬರ ಜಾಮೀನು ಅರ್ಜಿಯನ್ನ ರೋಸ್ ಅವೆನ್ಯೂ ಕೋರ್ಟ್ ತಿರಸ್ಕರಿಸಿದೆ. ಅಂದ್ಹಾಗೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಮೇ 30ರಂದು ಜಾರಿ ನಿರ್ದೇಶನಾಲಯ ಜೈನ್ ಅವರನ್ನು ಬಂಧಿಸಿತ್ತು.