ಎಐಸಿಸಿ ಅಧ್ಯಕ್ಷರ ಅವಿರೋಧ ಆಯ್ಕೆಗೆ ಹೈಕಮಾಂಡ್ ಒಲವು
ನವದೆಹಲಿ, ಸೆ. 16- ಅಖಿಲ ಭಾರತ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡುವ ಕಸರತ್ತು ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಧ್ಯಕ್ಷರಾಗಲು ನಿರಾಸಕ್ತಿ ಹೊಂದಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡುವಂತೆ ಹೈಕಮಾಂಡ್ ಸೂಚಿಸಿದೆ. ಇದು ಪಾರದರ್ಶಕ ನ್ಯಾಯಸಮ್ಮತ ಚುನಾವಣೆ ನಡೆಸುವಂತೆ ಬೇಡಿಕೆಯಿಟ್ಟ ಜಿ-೨೩ ಗುಂಪಿನ ನಾಯಕರಿಗೆ ಹೈಕಮಾಂಡ್ ಹಠಾತ್ ಶಾಕ್ ನೀಡಿದೆ.
೯,೩೦೦ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ವಿಧಾನದ ಬಗ್ಗೆಯೂ ಆತಂಕ ವ್ಯಕ್ತವಾಗಿದೆ. ಈ ಪ್ರತಿನಿಧಿಗಳು ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ. ಪಿಸಿಸಿ ಪ್ರತಿನಿಧಿಗಳ ಚುನಾವಣೆಯ ಮೇಲ್ವಿಚಾರಣೆ ಉಸ್ತುವಾರಿ ವಹಿಸಿದ್ದ ಪ್ರದೇಶ ಚುನಾವಣಾ ಅಧಿಕಾರಿಗಳು ಕೇಂದ್ರ ನಾಯಕತ್ವದಿಂದ ಆಯ್ಕೆಯಾದ ಗಾಂಧಿ ಕುಟುಂಬದ ನಿಷ್ಠಾವಂತರ ಗುಂಪುಗಾಗಿತ್ತು.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ಹೊರತುಪಡಿಸಿ ಯಾವುದೇ ರಾಜ್ಯದಲ್ಲಿ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರತಿನಿಧಿಗಳ ಆಯ್ಕೆಗೆ ಯಾವುದೇ ಚುನಾವಣೆಗಳು ಇರಲಿಲ್ಲ. ಹೊಸ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡುವ ಅಧಿಕಾರವನ್ನು ಎಐಸಿಸಿ ಸದಸ್ಯರು ರಾಜ್ಯ ಘಟಕಗಳಿಗೆ ನೀಡಿದ್ದಾರೆ.ಪಿಸಿಸಿ ತನ್ನ ಅಧ್ಯಕ್ಷರನ್ನು ಆಯ್ಕೆ ಮಾಡುವ ಅಧಿಕಾರವನ್ನು ರಾಷ್ಟ್ರೀಯ ಅಧ್ಯಕ್ಷರಿಗೆ ನೀಡಬಹುದು. ಒಂದು ವೇಳೆ ಚುನಾವಣೆ ಹೇಳಿಕೆ ಬಂದರೆ, ಚುನಾವಣೆ ನಡೆಸುವುದಾಗಿ ಕೇಂದ್ರ ಚುನಾವಣಾ ಸಮಿತಿ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಹೇಳಿದ್ದರು.
ಚುನಾವಣೆಯಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಅವರ ಕುಟುಂಬದಿಂದ ಯಾರೋಬ್ಬರು ಕಣಕ್ಕಿಳಿಯುವುದು ಜ-೨೩ ಗುಂಪಿನ ನಾಯಕರಿಗೆ ಇಷ್ಟವಿಲ್ಲ. ಹೀಗಾಗಿ ಇಂತಹ ಪಿಸಿಸಿ ಅಂಗೀಕಾರದಲ್ಲಿ ಯಾವುದೇ ಅರ್ಥವಿಲ್ಲ. ಪ್ರದೇಶ ಕಾಂಗ್ರೆಸ್ ಘಟಕಗಳು ಏನು ಮಾಡುತ್ತಿದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಯಾರಾದರೂ ಅಧ್ಯಕ್ಷ ಸ್ಥಾನ ಚುನಾವಣೆಗೆ ನಾಮಪತ್ರ ಸಲ್ಲಿಸಿದರೆ ಸ್ಪರ್ಧೆ ಇರುತ್ತದೆ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಸೆ. ೨೨ ರಂದು ಅಧಿಸೂಚನೆ ಹೊರಬೀಳಲಿದೆ. ಆ ವೇಳೆಗೆ ಎಲ್ಲ ಪ್ರದೇಶ ಕಾಂಗ್ರೆಸ್ ಘಟಕಗಳ ಅಧ್ಯಕ್ಷರ ಆಯ್ಕೆ ಪೂರ್ಣಗೊಳ್ಳಲಿದೆ. ಅಗತ್ಯ ಬಿದ್ದರೆ ಅ. ೧೭ ರಂದು ಚುನಾವಣೆ ನಡೆಯಲಿದೆ.