ಎನ್‌ಪಿಎಸ್ ಬಗ್ಗೆ ಚರ್ಚೆಗೆ ಸಿಎಂ ಬೊಮ್ಮಾಯಿ ಒಪ್ಪಿಗೆ

ಬೆಳಗಾವಿ: ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಳೆ ಪಿಂಚಣಿ ಯೋಜನೆ ಜಾರಿ ಸಂಬಂಧ ಚರ್ಚೆಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಸದನದಲ್ಲಿ ಎನ್‌ಪಿಎಸ್ ಬಗ್ಗೆ ಸಮಗ್ರ ಚರ್ಚೆ ನಡೆಸುತ್ತೇವೆ. ಎಲ್ಲಾ ಸದಸ್ಯರ ಅಭಿಪ್ರಾಯಗಳನ್ನು ಸಂಗ್ರಹಿಸಿದ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.