ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವ ಸಿದ್ದರಾಮಯ್ಯ ಆಸೆಗೆ ಡಿಕೆಶಿ ತಣ್ಣೀರು
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಂತಯೇ ಮುಂಬರುವ ಚುನಾವಣೆಯಲ್ಲೂ ಎರಡು ಕಡೆ ಸ್ಪರ್ಧೇ ಮಾಡುವ ಮಾಜಿ ಸಿಎಂ ಸಿದ್ದರಾಮಯ್ಯ ಕನಸಿಗೆ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ತಣ್ಣೀರೆರಚಿದ್ದಾರೆ.
ಈ ಬಾರಿ ಯಾರಿಗೆ ಆದರೂಒಂದೇ ಕ್ಷೇತ್ರದಲ್ಲಿ ಟಿಕೆಟ್ ಎಂದು ಖಡಕ್ಕಾಗಿ ಹೇಳುವ ಮೂಲಕ ಸಿದ್ದರಾಮಯ್ಯ ಅವರಿಗೆ ಪರೋಕ್ಷ ಸಂದೇಶ ರವಾನೆ ಮಾಡಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಕುಮಾರ್, ಅರ್ಜಿ ಸಂಗ್ರಹಿಸುವ ವೇಳೆ ಹಣ ಕಟ್ಟಿಸಿಕೊಳ್ಳುವುದು ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಆದರೆ ಈ ಬಾರಿ ಆಗಿದೆ.
ಚುನಾವಣಾ ತಯಾರಿ , ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ನಿರ್ಮಾಣ ಸೇರಿದಂತೆ ಹಲವು ವಿಚಾರವಾಗಿ ಆರ್ಥಿಕ ಶಕ್ತಿ ಅಗತ್ಯವಿದೆ. ಕಚೇರಿ ನಿರ್ಮಾಣಕ್ಕೆ ಕಾರ್ಯಕರ್ತರು ಆರ್ಥಿಕ ನೆರವು ಕೇಳಿದಾಗ ನಾವು ಹಣ ಸಹಾಯ ಮಾಡುತ್ತೇವೆ ಎಂದರು.