ಎಲ್ಲ ರಾಜ್ಯ ಸಿಎಂಗಳ ಜತೆ ಪ್ರಧಾನಿ ಮೋದಿ ಮೀಟಿಂಗ್ : ರಾಜ್ಯದಲ್ಲಿ ಮತ್ತಷ್ಟು ʼಟಫ್ ರೂಲ್ಸ್ʼ ಜಾರಿ?
ಬೆಂಗಳೂರು : ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳು ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸುತ್ತಿದ್ದಾರೆ.
ವಿಡಿಯೋ ಕಾನ್ಫೆರೆನ್ಸ್ ಮೂಲಕ ಪ್ರಧಾನಿ ಮೋದಿ ಈ ಸಭೆ ನಡೆಸುತ್ತಿದ್ದು, ಈ ಮೀಟಿಂಗ್‌ನಲ್ಲಿ ರಾಜ್ಯದ ಪರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಡಾ. ಅಶ್ವಸ್ಥ್ ನಾರಾಯಣ, ಗೃಹ ಸಚಿವ ಆರಗ ಜ್ಞಾನೇಂದ್ರ,ಆರೋಗ್ಯ ಸಚಿವ ಡಾ. ಸುಧಾಕರ್ ಸೇರಿ ಪಿಎಸ್ ಪಿ. ರವಿಕುಮಾರ್, ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್
ಆರೋಗ್ಯ, ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದಾರೆ. ಇನ್ನು ಪ್ರಧಾನಿ ಮೋದಿಯವ್ರಿಗೆ ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.
ಇನ್ನು ರಾಜ್ಯದಲ್ಲಿ ಹೇರಿರುವ ಟಫ್ ರೂಲ್ಸ್ ನಡುವೆಯೂ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗ್ತಿವೆ. ಹಾಗಾಗಿ ಮತ್ತಷ್ಟು ಕಠಿಣ ನಿಯಮಗಳನ್ನ ಜಾರಿ ಮಾಡಲು ಪ್ರಧಾನಿ ಮೋದಿ ಸೂಚನೆ ನೀಡುವ ಸಾಧ್ಯತೆಯಿದೆ ಎನ್ನಲಾಗ್ತಿದೆ.
Prime Minister Narendra Modi starts a virtual meeting with CMs to review the COVID19 situation in their respective states
— ANI (@ANI) January 13, 2022
(Source: Chhattisgarh CMO) pic.twitter.com/GXv6xKMWyH