'ಎಲ್ಲರೂ ಒಟ್ಟಾಗಿ ಪ್ರಚಾರ ಮಾಡಿ ಅಧಿಕಾರಕ್ಕೆ ಬರುತ್ತೇವೆ' : ಡಿ.ಕೆ ಶಿವಕುಮಾರ್

ನವದೆಹಲಿ : ಎಲ್ಲರೂ ಒಟ್ಟಾಗಿ ಪ್ರಚಾರ ಮಾಡಿ ಅಧಿಕಾರಕ್ಕೆ ಬರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.
ದೆಹಲಿಯಲ್ಲಿ ಮಾತನಾಡಿರುವ ಡಿಕೆಶಿ ಖರ್ಗೆ ಅವರಿಗೆ ಚುನಾವಣೆ ಮಾಡಿ ಬಹಳಷ್ಟು ಅನುಭವವಿದೆ ಹಿಮಾಚಲ ಪ್ರದೇಶ ಹಾಗೂ ದೆಹಲಿಯಲ್ಲಿ ಮೋದಿ ಮಂತ್ರ ನಡೆಯಲಿಲ್ಲ.
ರಾಜ್ಯದಲ್ಲಿ ಎಲ್ಲ ನಾಯಕರು ಒಂದಾಗಿ ಪ್ರಚಾರ ಮಾಡುತ್ತೇವೆ, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಗ್ಯಾರೆಂಟಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.