ಎಲ್‌ಇಟಿ ಮುಖ್ಯಸ್ಥ ಸೇರಿದಂತೆ ಮೂವರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಎಲ್‌ಇಟಿ ಮುಖ್ಯಸ್ಥ ಸೇರಿದಂತೆ ಮೂವರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೂರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್ ಉಗ್ರ ಸಂಘಟನೆಯ ಮುಖ್ಯಸ್ಥ ಸೇರಿದಂತೆ ಮೂವರು ಉಗ್ರರು ಹತರಾಗಿದ್ದಾರೆ.

ಉತ್ತರ ಕಾಶ್ಮೀರದ ತಂತ್ರೇಪೋರಾ ಬ್ರಾತ್ ಗ್ರಾಮದಲ್ಲಿ ಈ ಎನ್‌ಕೌಂಟರ್‌ ನಡೆದಿದೆ. ಭಯೋತ್ಪಾದಕ ಮುದಾಸಿರ್ ಪಂಡಿತ್ ಮತ್ತು ಇತರ ಇಬ್ಬರು ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ ಎಂದು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.
ಎಲ್‌ಇಟಿಯ ಮುಖ್ಯಸ್ಥ ಮುದಾಸಿರ್ ಪಂಡಿತ್ ಮೂವರು ಪೊಲೀಸರು, ಇಬ್ಬರು ಕೌನ್ಸಿಲರ್‌ಗಳು ಮತ್ತು ಇಬ್ಬರು ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದು, ಈತನಿಗಾಗಿ ಸೇನೆ ಜಾಲ ಬೀಸಿತ್ತು.

ಉಗ್ರರು ಅವಿತಿರುವ ಬಗ್ಗೆ ಮಾಹಿತಿ ಪಡೆದು ಶೋಧ ಕಾರ್ಯಾಚರಣೆ ಕೈಗೊಂಡಿದ್ದು, ಭಾನುವಾರ ತಡರಾತ್ರಿ ಎನ್‌ಕೌಂಟರ್ ಆರಂಭವಾಗಿತ್ತು.