ಎಸ್.ಎಂ.ಕೆ, ಸುಧಾಮೂರ್ತಿ ಸೇರಿ ರಾಜ್ಯದ 8 ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

ನವದೆಹಲಿ, ಮಾ.23- ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಇನೋಸಿಸ್ ಫೌಂಡೇಶನ್ ಸಂಸ್ಥಾಪಕಿ ಸುಧಾಮೂರ್ತಿ ಹಾಗೂ ಸಾಹಿತಿ ಎಸ್.ಎಲï.ಭೈರಪ್ಪ ಸೇರಿದಂತೆ ಒಟ್ಟು ಎಂಟು ಮಂದಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗಿದೆ.
2023ನೇ ಸಾಲಿನಲ್ಲಿ 6 ಪದ್ಮವಿಭೂಷಣ, 9 ಪದ್ಮಭೂಷಣ ಮತ್ತು 91 ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿತ್ತು.
ಪದ್ಮ ವಿಭೂಷಣವನ್ನು ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ನೀಡಲಾಗುತ್ತದೆ. ಉನ್ನತ ಶ್ರೇಣಿಯ ವಿಶಿಷ್ಟ ಸೇವೆಗಾಗಿ ಪದ್ಮಭೂಷಣ ಮತ್ತು ಯಾವುದೇ ಕ್ಷೇತ್ರದಲ್ಲಿ ವಿಶಿಷ್ಟ ಸೇವೆಗಾಗಿ ಪದ್ಮಶ್ರೀ ಪ್ರಶಸ್ತಿ ಕೊಟ್ಟು ಗೌರವಿಸಲಾಗುತ್ತದೆ. ಈ ಬಾರಿ ಆರು ಪದ್ಮವಿಭೂಷಣ, ಒಂಭತ್ತು ಪದ್ಮಭೂಷಣ ಮತ್ತು 91 ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಆದರೆ, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನವನ್ನು 2019ರಿಂದ ಯಾರಿಗೂ ಘೋಷಣೆ ಮಾಡಿಲ್ಲ.
ಕರ್ನಾಟಕದ ಎಂಟು ಜನರಿಗೆ ಗೌರವ:
ಈ ಬಾರಿ ಕರ್ನಾಟಕ ಜನರಿಗೆ ಪದ್ಮ ಪುರಸ್ಕಾರಗಳನ್ನು ಪ್ರಕಟಿಸಲಾಗಿದೆ. ಎಸ್.ಎಂ.ಕೃಷ್ಣ ಅವರಿಗೆ ಪದ್ಮವಿಭೂಷಣ ಪ್ರಕಟಿಸಿದ್ದರೆ, ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪ ಹಾಗೂ ಇನೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಇದರ ಜೊತೆಗೆ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಖಾದರ್ ವಲ್ಲಿ ದುಡೇಕುಲಾ, ಕಲಾ ವಿಭಾಗದಲ್ಲಿ ರಾಣಿ ಮಾಚಯ್ಯ, ನಾಡೋಜ ಪಿಂಡಿಪನಹಳ್ಳಿ ಮುನಿವೆಂಕಟಪ್ಪ ಮತ್ತು ಶಾ ರಶೀದ್ ಅಹ್ಮದ್ ಖಾದ್ರಿ ಹಾಗೂ ಪುರಾತತ್ವ ಕ್ಷೇತ್ರದಲ್ಲಿ ಎಸï.ಸುಬ್ಬರಾಮನ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.
ಜನವರಿ 26ರ ಗಣರಾಜ್ಯೋತ್ಸವದ ಮುನ್ನ ದಿನದಂದು 106 ದೇಶದ ಉನ್ನತ ನಾಗರಿಕ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿತ್ತು. ಇಂದು ಎಸ್.ಎಂ.ಕೃಷ್ಣ ಮತ್ತು ಹೆಸರಾಂತ ವಾಸ್ತುಶಿಲ್ಪಿ ಬಾಲಕೃಷ್ಣ ದೋಷಿ (ಮರಣೋತ್ತರ) ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ಪ್ರದಾನ ಮಾಡಲಾಯಿತು.
ಕೈಗಾರಿಕೋದ್ಯಮಿ ಕುಮಾರ್ ಮಂಗಳಂ ಬಿರ್ಲಾ, ದೆಹಲಿ ಮೂಲದ ಪ್ರೋ.ಕಪಿಲ್ ಕಪೂರ್, ಆಧ್ಯಾತ್ಮಿಕ ನಾಯಕ ಕಮಲೇಶ್ ಡಿ. ಪಟೇಲ್ ಮತ್ತು ಹಿನ್ನೆಲೆ ಗಾಯಕಿ ಸುಮನ್ ಕಲ್ಯಾಣಪುರ ಅವರಿಗೆ ದೇಶದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣ ನೀಡಲಾಯಿತು. ಕಳೆದ ವರ್ಷ ನಿಧನರಾದ ಬಿಲಿಯನೇರ್ ಷೇರು ಮಾರುಕಟ್ಟೆ ಹೂಡಿಕೆದಾರ ರಾಕೇಶ್ ಜುಂಜುನ್ವಾಲ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಲಾಯಿತು.
ಷೇರು ಮಾರುಕಟ್ಟೆಯಲ್ಲಿ ಅಪ್ರತಿಮ ಸಾಧನೆ ಮೂಲಕ ದೇಶದ ಹೂಡಿಕೆ ಕ್ಷೇತ್ರದಲ್ಲಿ ಹೊಸ ಸಂಚಲನ ಸೃಷ್ಟಿಸಿದ ರಾಕೇಶ್ ಜುಂಜುನ್ವಾಲ ಇತ್ತೀಚೆಗಷ್ಟೇ ನಿಧನರಾಗಿದ್ದಾರೆ. ರಾಕೇಶ್ ಜುಂಜುನ್ವಾಲ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಕೇಶ್ ಜುಂಜುನ್ವಾಲ ಪರವಾಗಿ ಅವರ ಪತ್ನಿ ರೇಖಾ ಜುಂಜುನವಾಲ ಪ್ರಶಸ್ತಿ ಸ್ವೀಕರಿಸಿದರು. ಈ ವೇಳೆ ಜುಂಜುನವಾಲ ಕುಟುಂಬಸ್ಥರು ಉಪಸ್ಥಿತರಿದ್ದರು.
ವಾಸ್ತುಶಿಲ್ವ ಸಾಧನೆಯಲ್ಲಿ ಗುಜರಾತ್ನ ಬಾಲಕೃಷ್ಣ ದೋಶಿ(ಮರಣೋತ್ತರ), ಕಲಾ ಸಾಧನೆಗೈದ ಮಹಾರಾಷ್ಟ್ರದ ಝಾಕೀರ್ ಹುಸೇನ್, ಸಾರ್ವಜನಿಕ ವ್ಯವಹಾರ ಕ್ಷೇತ್ರದಲ್ಲಿ ಕರ್ನಾಟಕ ಮಾಜಿ ಸಿಎಂ ಎಂ.ಎಸ್.ಕೃಷ್ಣ, ಮೆಡಿಸಿನ್ ಕ್ಷೇತ್ರದಲ್ಲಿನ ಸಾಧನೆಗೆ ಪಶ್ಚಿಮ ಬಂಗಾಳದ ದಿಲೀಪ್ ಮಹಾಲಾನಬಿಸ್ (ಮರಣೋತ್ತರ), ವಿಜ್ಞಾನ ಹಾಗೂ ಎಂಜಿನಿಯರ್, ಅಮೆರಿಕದ ಶ್ರೀನಿವಾಸ್ ವರ್ಧನ್, ಸಾರ್ವಜನಿಕ ವ್ಯವಹಾರ ಕ್ಷೇತ್ರದಲ್ಲಿ ಮುಲಾಯಂ ಸಿಂಗ್ ಯಾದವ್(ಮರಣೋತ್ತರ) ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.
ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ
ಅಂತೆಯೇ ಛತ್ತೀಸ್‍ಗಢದ ಜಾನಪದ ಕಲಾ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ ಪಾಂಡವಾನಿ ಗಾಯಕಿ ಉಷಾ ಬಾರ್ಲೆ ಅವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು. ಇನ್ನು ಸುಕಮ ಆಚಾರ್ಯ, ಜೋಧಯ್ಯಬಾಯಿ ಬೈಗಾ, ಪ್ರೇಮ್‍ಜಿತ್ ಬರಿಯಾ, ಮುನೀಶ್ವರ ಚಂದಾವರ, ಹೇಮಂತ್ ಚೌಹಾಣ್ ಭಾನುಭಾಯಿ ಚಿತಾರಾ, ಹೆಮೊಪೆÇ್ರವಾ ಚುಟಿಯಾ, ನರೇಂದ್ರ ಚಂದ್ರ ದೆಬ್ಬರ್ಮ (ಮರಣೋತ್ತರ),ಸುಭದ್ರಾ ದೇವಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.
ಖಾದರ್ ವಲ್ಲಿ ದೂದೇಕುಲ, ಹೇಂ ಚಂದ್ರ ಗೋಸ್ವಾಮಿ, ಪ್ರಿತಿಕಾನಾ ಗೋಸ್ವಾಮಿ, ರಾಧಾ ಚರಣ್ ಗುಪ್ತಾ, ಮೊಡಡುಗು ವಿಜಯ್ ಗುಪ್ತಾ, ಅಹ್ಮದ್ ಹುಸೇನ್ ಮತ್ತು ಮೊಹಮ್ಮದ್ ಹುಸೇನ್ (ಜೋಡಿ), ದಿಲ್ಶಾದ್ ಹುಸೇನ್, ಭಿಕು ರಾಮ್‍ಜೀ ಇದತೇ, ಸಿ ಐ ಇಸಾಕ್, ರತ್ತನ್ ಸಿಂಗ್ ಜಗ್ಗಿ, ಬಿಕ್ರಮ್ ಬಹದ್ದೂರ್ ಜಮಾತಿಯಾ ಅವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.ಇನ್ನು ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಒಟ್ಟು 106 ಮಂದಿಗೆ ಪದ್ಮಪುರಸ್ಕಾರದ ಗೌರವ ದೊರೆಯಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಸೇರಿದಂತೆ ಹಲವು ಗಣ್ಯರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ರಾಜ್ಯ ಬಿಜೆಪಿ ನಾಯಕರು ಟ್ವಿಟ್:
ಎಸ್.ಎಂ. ಕೃಷ್ಣ ಅವರಿಗೆ ರಾಜ್ಯ ಬಿಜೆಪಿ ನಾಯಕರು ಟ್ವೀಟ್ ಮಾಡಿ ಶುಭ ಕೋರಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‍ಕುಮಾರ್ ಕಟೀಲï, ನಾಡಿನ ಮುತ್ಸದ್ಧಿ ರಾಜಕಾರಣಿ, ಮಂಡ್ಯ ಜಿಲ್ಲೆಯ ಮನೆಮಗ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ನವದೆಹಲಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರಿಂದ ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿದರು. ನಾಡಿನ ಸಮಸ್ತರಿಗೂ ಇದು ಹೆಮ್ಮೆಯ ಸಂಗತಿ ಎಂದು ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವಿಟ್ ಮಾಡಿ, ರಾಜಕೀಯ ರಂಗದಲ್ಲಿ ಎಲ್ಲರ ಜೊತೆಗೂ ಆತ್ಮೀಯತೆಯಿಂದ ಬೆರೆತು ಸರಳ ಸಜ್ಜನಿಕೆಯ ರಾಜಕಾರಣಿ ಎಂದೇ ಕರೆಯಲ್ಪಡುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಹಾಗೂ ಕೇಂದ್ರ ಸರ್ಕಾರದ ಮಾಜಿ ಸಚಿವರು, ಹಿರಿಯರಾದ ಎಸ್.ಎಂ.ಕೃಷ್ಣ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಲಭಿಸಿರುವುದು ಸಂತಸದ ಸುದ್ದಿ. ತಮ್ಮ ಆಡಳಿತಾವಯಲ್ಲಿ ಹತ್ತು-ಹಲವು ಜನಪರ ಯೋಜನೆಗಳನ್ನು ನೀಡಿ ರಾಜ್ಯದಲ್ಲಿ ಅತ್ಯಂತ ಸುಶಿಕ್ಷಿತ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿ ಜನರ ವಿಶ್ವಾಸ ಗಳಿಸಿದ್ದ ೀಮಂತ ನಾಯಕ ಎಸ್.ಎಂ.ಕೃಷ್ಣ ಅವರಿಗೆ ಅಭಿನಂದನೆಗಳು ಎಂದಿದ್ದಾರೆ.
ಓರ್ವ ತಮಟೆ ಕಲಾವಿದನಿಗೂ ದೇಶದ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಹುಡುಕಿಕೊಂಡು ಬರುತ್ತದೆ ಎಂದರೆ ಅದು ಓರ್ವ ಪ್ರಧಾನಸೇವಕನ ಆಡಳಿತದಲ್ಲಿ ಮಾತ್ರ ಸಾಧ್ಯ. ಚಿಕ್ಕಬಳ್ಳಾಪುರದ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಅವರಿಗೆ ಇಂದು ರಾಷ್ಟ್ರಪತಿಗಳು ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಸಾಮಾನ್ಯರಲ್ಲಿ ಸಾಮಾನ್ಯರಿಗೂ ರಾಷ್ಟ್ರವೇ ಮೆಚ್ಚುವಂತಹ ಗೌರವ ಲಭಿಸುತ್ತಿದೆ ಎಂದರೆ ನಮಗೆಲ್ಲರಿಗೂ ಹೆಮ್ಮೆಯ ಸಂಗತಿ. ಹಿರಿಯರಾದ ಮುನಿವೆಂಕಟಪ್ಪ ಅವರಿಗೆ ಗೌರವಪೂರ್ವಕ ಅಭಿನಂದನೆಗಳು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದಾರೆ.