ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್'ಗೆ ಅವಕಾಶವಿಲ್ಲ

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಜಿಲ್ಲೆಯಲ್ಲಿ 116 ಕೇಂದ್ರಗಳಲ್ಲಿ ಪರೀಕ್ಷೆ 29,599 ವಿದ್ಯಾರ್ಥಿ, ವಿದ್ಯಾರ್ಥಿನಿಯರ ಪರೀಕ್ಷೆ ಬರೆಯಲು ನೋಂದಣಿ ಮಾಡಿದ್ದಾರೆ. ಹೀಗಾಗಿ
ಪರೀಕ್ಷಾ ಕ್ಷೇತ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಕಲ ಸಿದ್ಧತೆ ಮಾಡಿಕೊಂಡಿದೆ.
ಪರೀಕ್ಷೆ ಬರೆಯುವ ಮಕ್ಕಳಿಗೆ ಏನೂ ಅಡಚಣೆ ಆಗದ ರೀತಿಯಲ್ಲಿ ನಿರ್ಭೀತಿಯಿಂದ ಪರೀಕ್ಷೆ ಬರೆಯುವ ವಾತಾವರಣ ರೂಪಿಸುವಲ್ಲಿ ಹಲವು ಕ್ರಮಗಳನ್ನ ಶಿಕ್ಷಣ ಇಲಾಖೆ ಅಧಿಕಾರಿಗಳು ಕೈಗೊಂಡಿದ್ದಾರೆ.ಪರೀಕ್ಷಾ ಕೇಂದ್ರದ ಸುತ್ತ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇಂದು 'ಕನ್ನಡ' ವಿಷಯ ಪರೀಕ್ಷೆಯನ್ನು ವಿದ್ಯಾರ್ಥಿಗಳು ಬರೆಯಲಿದ್ದಾರೆ.
ಕೋವಿಡ್ ನಿಯಮಾವಳಿ ಪಾಲನೆ ಹಿನ್ನೆಲೆಯಲ್ಲಿ ಈ ಬಾರಿಯೂ ಎಸೆಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕೋವಿಡ್ ನಿಯಮಗಳನ್ನ ಪಾಲಿಸಬೇಕಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ. ಹಿಜಾಬ್ ಧರಿಸಿದ ಮಕ್ಕಳು ಪರೀಕ್ಷಾ ಕೊಠಡಿಗೆ ತೆರಳುವ ಮುನ್ನ ಹಿಜಾಬ್ ತೆಗೆದಿಡಲು ಪ್ರತ್ಯೇಕ ವ್ಯವಸ್ಥೆ ಕೂಡ ಮಾಡಲಾಗಿದೆ.