ಎಸ್.ಎಸ್.ಎಲ್.ಸಿ. ಪ್ರಶ್ನೆ ಪತ್ರಿಕೆಗೆ ಶಿಕ್ಷಣ ಇಲಾಖೆಯಿಂದ 60 ರೂ. ವಸೂಲಿ: ವಿರೋಧ

ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆ ತಯಾರಿಕೆಗೆ ಮಕ್ಕಳಿಂದ ತಲಾ 60 ರೂಪಾಯಿ ಸಂಗ್ರಹಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಇದಕ್ಕೆ ವಿರೋಧ ವ್ಯಕ್ತವಾಗಿದೆ.
2022 -23ನೇ ಸಾಲಿನ ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲು ಪ್ರತಿ ಮಕ್ಕಳಿಂದ 60 ರೂ.
ತಾಲೂಕು ಮಟ್ಟದಲ್ಲಿಯೇ ಎಸ್.ಎಸ್.ಎಲ್.ಸಿ. ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ತಯಾರಾಗಲಿದ್ದು, ಈ ಹಿಂದೆ ಮಕ್ಕಳಿಂದ ಶುಲ್ಕ ಸಂಗ್ರಹಿಸುತ್ತಿರಲಿಲ್ಲ. ಈ ಬಾರಿ ಶುಲ್ಕ ಸಂಗ್ರಹಿಸಲು ಸೂಚನೆ ನೀಡಲಾಗಿದೆ. ರಾಜ್ಯದ ಸುಮಾರು 5 ಲಕ್ಷಕ್ಕೂ ಅಧಿಕ ಮಕ್ಕಳು ತಲಾ 60 ರೂಪಾಯಿ ಪಾವತಿಸುವ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಹೇಳಲಾಗಿದೆ.