ಏ.3ರಂದು ಜೆಡಿಎಸ್‌ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್‌ : ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಸ್ಪಷ್ಟನೆ

ಏ.3ರಂದು ಜೆಡಿಎಸ್‌ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್‌ : ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು : ಮುಂದಿನ ವಿಧಾನ ಸಭೆ ಚುನಾವಣೆ ಡೇಟ್‌ ಫಿಕ್ಸ್‌ ಆಗಿದ್ದು ಈ ನಿಟ್ಟಿನಲ್ಲಿ ಸೋಮವಾರ ( ಏ.3ರಂದು) ಜೆಡಿಎಸ್‌ ಚುನಾವಣಾ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ಮಾದನಾಯಕನಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಮಾಧ್ಯಮಗಳೊಂದಿಗೆ ಮಾತನಾಡಿ , ಮುಂದಿನ ವಿಧಾನ ಸಭೆ ಚುನಾವಣೆಗೆ ಸೋಮವಾರ ಜೆಡಿಎಸ್‌ ಚುನಾವಣಾ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. 2 ನೇ ಪಟ್ಟಿಯಲ್ಲೇ ಹಾಸನ ಟಿಕೆಟ್‌ ಕೂಡಾ ಘೋಷಣೆ ಯಾಗಲಿದೆ. ಹಾಸನ ಕ್ಷೇತ್ರದಲ್ಲಿ ಬಂದಾಯ ಇದ್ದೂ ಸೊಪ್ಪು ಹಾಕುವಂತಿಲ್ಲ , ಜೆಡಿಎಸ್‌ ಅಭ್ಯರ್ಥಿಗಳ ಮಾತಿಗೆ ಸ್ಪಂದನೆ ನೀಡುತ್ತೇವೆ ಎಂದು ಜೆಡಿಎಸ್‌ ಚುನಾವಣಾ ಪಟ್ಟಿ ಬಿಡುಗಡೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಕೆಲ ದಿನಗಳ ಹಿಂದೆಯೇ ಕರ್ನಾಟಕ ವಿಧಾನಸಭಾ ಚುನಾವಣೆಯೂ ಮೇ.10ರಂದು ಮತದಾನ ನಡೆಯಲಿದ್ದು, ಮೇ.13ರಂದು ಮತಏಣಿಕೆ ನಡೆದು, ಅಂದೇ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ