ಐಎನ್‌ಎಕ್ಸ್ ಮೀಡಿಯಾ ಹಗರಣ| ಚಿದಂಬರಂ ವಿರುದ್ಧ ವಿಚಾರಣೆಗೆ ದೆಹಲಿ ಹೈಕೋರ್ಟ್ ತಡೆ

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹಾಗೂ ಪುತ್ರ ಕಾರ್ತಿ ಅವರ ಪಾತ್ರ ಕುರಿತು ಸಿಬಿಐ ತನಿಖೆ ನಡೆಸುತ್ತಿದ್ದು, ಈ ಸಂಬಂಧ ಕೆಳ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆಗೆ ದೆಹಲಿ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.
ಆರೋಪಿತರಿಗೆ ದಾಖಲೆಗಳನ್ನು ಒದಗಿಸುವಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ನಿರ್ದೇಶನವನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ನ್ಯಾಯಾಮೂರ್ತಿ ಸುರೇಶಕುಮಾರ್ ಕೈಟ್ ಅವರು ಚಿದಂಬರಂ ಹಾಗೂ ಇತರರಿಗೆ ನೋಟಿಸ್ ನೀಡಿದ್ದಾರೆ.
ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ, ವಿದೇಶಿ ಬಂಡವಾಳ ಉತ್ತೇಜನಾ ಮಂಡಳಿಯು ₹ 305 ಕೋಟಿ ವಿದೇಶಿ ಹೂಡಿಕೆಯನ್ನು ಸ್ವೀಕರಿಸಲು ಐಎನ್‌ಎಕ್ಸ್ ಮೀಡಿಯಾಕ್ಕೆ ಅನುಮತಿ ನೀಡಿತ್ತು. ಈ ರೀತಿ ಅನುಮತಿ ನೀಡುವ ವೇಳೆ ಭಾರಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ 2017ರಲ್ಲಿ ಸಿಬಿಐ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತು.
ನಂತರ, ಜಾರಿ ನಿರ್ದೇಶನಾಲಯವು (ಇ.ಡಿ) ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿತು.ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹಾಗೂ ಪುತ್ರ ಕಾರ್ತಿ ಅವರ ಪಾತ್ರ ಕುರಿತು ಸಿಬಿಐ ತನಿಖೆ ನಡೆಸುತ್ತಿದ್ದು, ಈ ಸಂಬಂಧ ಕೆಳ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆಗೆ ದೆಹಲಿ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.
ಆರೋಪಿತರಿಗೆ ದಾಖಲೆಗಳನ್ನು ಒದಗಿಸುವಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ನಿರ್ದೇಶನವನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ನ್ಯಾಯಾಮೂರ್ತಿ ಸುರೇಶಕುಮಾರ್ ಕೈಟ್ ಅವರು ಚಿದಂಬರಂ ಹಾಗೂ ಇತರರಿಗೆ ನೋಟಿಸ್ ನೀಡಿದ್ದಾರೆ.
ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ, ವಿದೇಶಿ ಬಂಡವಾಳ ಉತ್ತೇಜನಾ ಮಂಡಳಿಯು ₹ 305 ಕೋಟಿ ವಿದೇಶಿ ಹೂಡಿಕೆಯನ್ನು ಸ್ವೀಕರಿಸಲು ಐಎನ್‌ಎಕ್ಸ್ ಮೀಡಿಯಾಕ್ಕೆ ಅನುಮತಿ ನೀಡಿತ್ತು. ಈ ರೀತಿ ಅನುಮತಿ ನೀಡುವ ವೇಳೆ ಭಾರಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ 2017ರಲ್ಲಿ ಸಿಬಿಐ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿತು.
ನಂತರ, ಜಾರಿ ನಿರ್ದೇಶನಾಲಯವು (ಇ.ಡಿ) ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿತು.