ಮಾ.11ಕ್ಕೆ ಧಾರವಾಡಕ್ಕೆ ಪ್ರಧಾನಿ ಆಗಮನ : ಐಐಟಿ ಉದ್ಘಾಟಿಸಲಿರುವ ನರೇಂದ್ರ ಮೋದಿ

ಮಾ.11ಕ್ಕೆ ಧಾರವಾಡಕ್ಕೆ ಪ್ರಧಾನಿ ಆಗಮನ : ಐಐಟಿ ಉದ್ಘಾಟಿಸಲಿರುವ ನರೇಂದ್ರ ಮೋದಿ

ಧಾರವಾಡ : ಮುಂದಿನ ಚುನಾವಣೆಗೆ ರಣತಂತ್ರ ರೂಪಿಸುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಧಾನಿ ಭೇಟಿ ನೀಡಿ ಸಂಚಲನ ಸೃಷ್ಟಿಸಿದ್ದು, ಇದೀಗ ಮಾರ್ಚ್ 11 ರಂದು ಪ್ರಧಾನಿ ಮೋದಿ ಆಗಮಿಸಲಿದ್ದಾರೆ ಎಂದುಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಜನತಾ ಬಜಾರ್ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ, ಮಾರ್ಚ್ 11 ರಂದು ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಏಪ್ರಿಲ್‌ನಲ್ಲಿ ಧಾರವಾಡ - ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ಹೊಸ ರೈಲು ಸೇವೆಗೆ ಚಾಲನೆ ನೀಡಲಾಗುವುದು, ವಂದೇ ಭಾರತ್ ಎಕ್ಸ್‌ಪ್ರೆಸ್ ಮೂಲಕ ಐದು ಗಂಟೆಗಳಲ್ಲಿ ಬೆಂಗಳೂರು ತಲುಪಲು ಸಹಾಯವನ್ನು ಮಾಡುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಪ್ರಧಾನಿ ಆಗಮನಕ್ಕಾಗಿ ಭರ್ಜರಿ ಸಿದ್ದತೆ ನಡೆಸಲಾಗುತ್ತಿದ್ದು ಹೆಚ್ಚಿನ ಪೊಲೀಸ್‌ ಭದ್ರತೆ ನೀಡಲಾಗುತ್ತಿದ್ದು, ಭಾರೀ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.