ಒಂದೇ ಕುಟುಂಬದ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ: ಮಾಜಿ ಗ್ರಾಪಂ ಸದಸ್ಯನ ವಿರುದ್ಧ ದೂರು ದಾಖಲು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹಿರೇಹಣಗಿ ಗ್ರಾಮದ ಮಾಜಿ ಗ್ರಾಮ ಪಂಚಾಯ್ತಿ ಸದಸ್ಯನೊಬ್ಬ ಇಬ್ಬರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರೋ ಆರೋಪ ಕೇಳಿ ಬಂದಿದ್ದೆ. ಅಲ್ಲದೇ ಈ ಸಂಬಂಧ ಅವರ ವಿರುದ್ಧ ಮಹಿಳೆಯರು ನೀಡಿದಂತ ದೂರು ಆದರಿಸಿ, ಪ್ರಕರಣ ದಾಖಲಾಗಿದೆ.
ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹಿರೇಹಣಗಿ ಗ್ರಾಮದ ಮಾಜಿ ಗ್ರಾಮ ಪಂಚಾಯ್ತಿ ಸದಸ್ಯ ಹನುಮಂತಪ್ಪ ಎಂಬುವರೇ, ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದಾತ ಆಗಿದ್ದಾನೆ. ಈತ ಹಿರೇಹಣಗಿ ಗ್ರಾಮದ ಇಬ್ಬರು ಮಹಿಳೆಯರು ಹೊಲಕ್ಕೆ ಹೋಗುತ್ತಿದ್ದಾಗ ಫಾಲೋ ಮಾಡಿಕೊಂಡು ಹೋಗಿ, ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದನು ಎನ್ನಲಾಗಿದೆ.
ಈ ಸಂಬಂಧ ಇಂದು ಸಂತ್ರಸ್ತ ಮಹಿಳೆಯರು ಮಾಜಿ ಗ್ರಾಮ ಪಂಚಾಯ್ತಿ ಸದಸ್ಯ ಹನುಮಂತಪ್ಪ ವಿರುದ್ಧ ಕವಿತಾಳ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಆ ದೂರಿನಲ್ಲಿ ತಮಗೆ ಆರೋಪಿ 2 ವರ್ಷಗಳಿಂದ ನಿತ್ಯ ಕಿರುಕುಳ ನೀಡುತ್ತಿದ್ದಾನೆ. ಒಮ್ಮೊಮ್ಮೆ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಒಳಗೆ ಬಂದು ಸಿಗರೇಟ್ ನಿಂದ ಮೈಸುಟ್ಟು ವಿಕೃತಿ ಮೆರೆದಿದ್ದಾನೆ. ನನ್ನ ಬಳಿ ಪೋನ್ ನಲ್ಲಿ ಮಾತನಾಡಿದ ಆಡಿಯೋ ಇದ್ದಾವೆ, ಅವುಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ, ಈತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.