ಒಂದೇ ಕುಟುಂಬದ ನಾಲ್ವರ ಭೀಕರ ಕೊಲೆ; ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಶವಗಳು!

ಉತ್ತರಕನ್ನಡ: ರಾಜ್ಯದಲ್ಲಿ ಬರ್ಬರವಾಗಿ ಕೊಲೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಇಂದು ಒಂದೇ ಕುಟುಂಬದ ನಾಲ್ವರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ದುಷ್ಕರ್ಮಿಗಳ ಕ್ರೌರ್ಯಕ್ಕೆ ಬಲಿಯಾದ ಜೀವಗಳು ಶವಗಳಾಗಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿ ಗ್ರಾಮದಲ್ಲಿ ಈ ಕೊಲೆ ನಡೆದಿದೆ. ಶಂಭು ಭಟ್ (65), ಅವರ ಪತ್ನಿ ಮಾದೇವಿ ಭಟ್ (40), ಪುತ್ರ ರಾಜೀವ್ ಭಟ್ (34) ಹಾಗೂ ಸೊಸೆ ಕುಸುಮಾ ಭಟ್ (30) ಕೊಲೆಯಾದವರು. ನಾಲ್ವರನ್ನೂ ಕತ್ತಿಯಿಂದ ಕಡಿದು ಕೊಲೆ ಮಾಡಲಾಗಿದೆ.
ಸ್ಥಳಕ್ಕೆ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರ ಧಾವಿಸಿದ್ದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ.