ವಿಜಯನಗರದಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತು, ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ವಿಜಯನಗರದಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತು, ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು

ವಿಜಯನಗರ : ಜಿಲ್ಲೆಯಲ್ಲಿ ಘೋರ ದುರಂತ ಸಂಭವಿಸಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಪನಹಳ್ಳಿ ತಾಲೂಕಿನ ನೀಲಗುಂದದಲ್ಲಿ ನಡೆದಿದೆ.

ಇಬ್ಬರು ಪುತ್ರಿಯರ ಜೊತೆ ತಾಯಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣ ಎನ್ನಲಾಗುತ್ತಿದೆ.

ಆತ್ಮಹತ್ಯೆಗೆ ಶರಣಾದವರನ್ನು ತಾಯಿ ಭವ್ಯಾ ಹಾಗೂ ಮಕ್ಕಳಾದ ಕಾವ್ಯ, ಅಮೂಲ್ಯ ಎಂದು ಗುರುತಿಸಲಾಗಿದೆ. 3 ದಿನದಿಂದ ಪತಿ ಮನೆಗೆ ಬಂದಿರಲಿಲ್ಲ, ಪತಿ ಮನೆಯಲ್ಲಿ ಇಲ್ಲದ ವೇಳೆ ಪತ್ನಿ ತನ್ನ ಇಬ್ಬರು ಮಕ್ಕಳೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಹಲವಾಗಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.