ಒಂದೇ ಕ್ಷೇತ್ರದಲ್ಲಿ ಇಬ್ಬರು `ಕೈ' ಆಕಾಂಕ್ಷಿಗಳು : ಸುರ್ಜೆವಾಲಾರಿಂದ ಅಂತಿಮ ನಿರ್ಧಾರ!

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಈಗಾಗಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್ ಇದೀಗ 100 ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆಗೆ ಸಿದ್ದತೆ ನಡೆಸಿದೆ.
ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡಗಡೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ ನಾಯಕರು ಇದೀಗ, ಒಂದೇ ಕ್ಷೇತ್ರದಲ್ಲಿ ಇಬ್ಬರು ಆಕಾಂಕ್ಷಿಗಳಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆಯನ್ನು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾಗೆ ವಹಿಸಲಾಗಿದೆ.
ಇಬ್ಬರು ಹೆಸರಿರುವ ಪಟ್ಟಿಗೆ ರಣದೀಪ್ ಸಿಂಗ್ ಸುರ್ಜೆವಾಲಾ ಮಹತ್ವದ ಮುದ್ರೆ ಒತ್ತಲಿದ್ದು, ಒಂದೇ ಕ್ಷೇತ್ರದಲ್ಲಿ ಇಬ್ಬರು ಆಕಾಂಕ್ಷಿಗಳ ಪಟ್ಟಿ ಫೈನಲ್ ಮಾಡಲು ಸುರ್ಜೆವಾಲಾ ಭೇಟಿ ಮಾಡುವಂತೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೂಚಿಸುತ್ತಿದ್ದಾರೆ. ಹೀಗಾಗಿ ಸುರ್ಜೆವಾಲಾ ಭೇಟಿಯಾಗಿ ಆಕಾಂಕ್ಷಿಗಳು ಒತ್ತಡ ಹೇರುತ್ತಿದ್ದಾರೆ.