ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಒಳಒಪ್ಪಂದ; ಒಗ್ಗಟ್ಟಾಗಿ ಕೆಲಸ ಮಾಡಲು ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ

ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಒಳಒಪ್ಪಂದ; ಒಗ್ಗಟ್ಟಾಗಿ ಕೆಲಸ ಮಾಡಲು ಕಾರ್ಯಕರ್ತರಿಗೆ ಸಿದ್ದರಾಮಯ್ಯ ಕರೆ
2023 ರ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಈಗಾಗಲೇ ತಮ್ಮ ಪಕ್ಷದ ಕಾರ್ಯಕರ್ತರಿಗೆ ಏಕತಾ ಮಂತ್ರವನ್ನು ಬೋಧಿಸಿದೆ. ಮೈಸೂರು: 2023 ರ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಈಗಾಗಲೇ ತಮ್ಮ ಪಕ್ಷದ ಕಾರ್ಯಕರ್ತರಿಗೆ ಏಕತಾ ಮಂತ್ರವನ್ನು ಬೋಧಿಸಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ತಂತ್ರದಿಂದಾಗಿ ಜೆಡಿಎಸ್ ನ ಜಿಟಿ ದೇವೇಗೌಡರ ಪರ ಬಿಜೆಪಿ ಮತಗಳನ್ನು ವರ್ಗಾವಣೆ ಮಾಡಲು ಅನುಕೂಲವಾಯಿತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆಂತರಿಕ ಕಚ್ಚಾಟದಿಂದ ಕಾಂಗ್ರೆಸ್ ಸೋಲುವುದನ್ನು ಗಮನಿಸಿದ ಅವರು, ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಜನರು ಬಯಸುತ್ತಿರುವಂತೆ ಎಲ್ಲರೂ ತಮ್ಮ ಭಿನ್ನಾಭಿಪ್ರಾಯಗಳನ್ನು ತೊರೆದು ಪಕ್ಷದ ಅಭ್ಯರ್ಥಿಗಾಗಿ ಕೆಲಸ ಮಾಡಬೇಕು ಎಂದರು. ಜೆಡಿಎಸ್ಗೆ ಯಾವುದೇ ಸಿದ್ಧಾಂತವಿಲ್ಲ, ಬಿಜೆಪಿ ಅಥವಾ ಕಾಂಗ್ರೆಸ್ನೊಂದಿಗೆ ಕೈಜೋಡಿಸಿ ಅಧಿಕಾರ ಅನುಭವಿಸಲು ಮಾತ್ರ ಬಯಸುತ್ತಿದೆ ಎಂದು ಆರೋಪಿಸಿದರು. ಇದೆಲ್ಲಾ ಇದ್ದರೂ ಬಿಜೆಪಿ ಮತ್ತು ಜೆಡಿಎಸ್ ಎರಡನ್ನೂ ಸೋಲಿಸಲು ಪಕ್ಷ ಸಿದ್ಧವಾಗಿದೆ ಎಂದು ಹೇಳಿದರು.