ಒತ್ತುವರಿ ಜಾಗ ಪರಿಶೀಲಿಸಿದ ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ಮಜುರಾಯಿ ಇಲಾಖೆಯ ಜಾಗ ಒತ್ತುವರಿ ಮಾಡಿರುವ ಪ್ರಕರಣ ಸಂಬಂಧ ಇಲಾಖೆಯ ಪರ ಹೈಕೋರ್ಟ್ ಆದೇಶ ಬಂದ ಹಿನ್ನೆಲೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಶಾಂತಿನಗರ ವಿಧಾನಸಭಾ ಕ್ಷೇತ್ರದ ನೀಲಸಂದ್ರ ಗ್ರಾಮದ ಸರ್ವೆ ನಂಬರ್ 79ರ 15 ಎಕರೆ 12 ಗುಂಟೆ ಒತ್ತುವರಿ ಮಾಡಿ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಇವುಗಳ ತೆರವು ವಿಚಾರವಾಗಿ ಪ್ರಕರಣ ಹೈಕೋರ್ಟ್ನಲ್ಲಿತ್ತು. ಸದ್ಯ ಮುಜರಾಯಿ ಇಲಾಖೆಯ ಪರವಾಗಿ ತೀರ್ಪು ಬಂದಿದೆ.