ಒಮೈಕ್ರಾನ್ ಟೆಸ್ಟಿಂಗ್ ಲ್ಯಾಬ್‌ಗಳನ್ನು ಹೆಚ್ಚಿಗೆ ಮಾಡುತ್ತೆವೆ: ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಒಮೈಕ್ರಾನ್ ಟೆಸ್ಟಿಂಗ್ ಲ್ಯಾಬ್‌ಗಳನ್ನು ಹೆಚ್ಚಿಗೆ ಮಾಡುತ್ತೆವೆ. ಈಗಾಗಲೇ ಒಂದು ಜಿನೊಮಿಕ್ ಸ್ವಿಕ್ವೇನ್ಸ್ ಲ್ಯಾಬ್ ಮಾಡಿದ್ದೇವೆ. ಅದನ್ನು ಮುಂದಿನ ದಿನಗಳಲ್ಲಿ ಹೆಚ್ಚಿಗೆ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಬಳಿಕ ಮೋದಿ ಟ್ವಿಟರ್ ಹ್ಯಾಕ್ ವಿಚಾರವಾಗಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಈಗಾಗಲೇ ಪ್ರಧಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಅದರ ವಿರುದ್ದ ಕಾರ್ಯಚರಣೆ ಕೂಡಾ ಮಾಡಿದ್ದಾರೆ. ಈ ರೀತಿ ಅಲ್ಲಲ್ಲಿ ಘಟನೆಗಳು ಆಗುತ್ತಿವೆ. ತಾಂತ್ರಿಕ ಬಲದಿಂದ ಅವುಗಳನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.