ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ರಾಮನಗರ : ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಾರ್ಯದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕಂಚುಗಲ್​ ಬಂಡೆಮಠದ ಬಸವಲಿಂಗ ಸ್ವಾಮೀಜಿ ಮೂರು ಪುಟಗಳ ಡೆತ್‌ ನೋಟ್ ಬರೆದಿಟ್ಟು ಮಠದ ತಮ್ಮ ಕೊಠಡಿಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್‌ ನೋಟ್​ನಲ್ಲಿ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕೆಲವರು ನನಗೆ ಬೆದರಿಕೆ ಕರೆ ಮಾಡಿ ಹೆದರಿಸುತ್ತಿದ್ದಾರೆ. ನನಗೆ ಯಾರ ಸಹಾಯವೂ ಇರಲಿಲ್ಲ ಎಂದು ಉಲ್ಲೇಖಿಸಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಇಂದು ಮಠದ ಆವರಣದಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.