ಕಾಂಗ್ರೆಸ್ ನಾಯಕರಿಗೆ ಸಿಎಂ ಮನವಿ ಪತ್ರ

ಬೆಂಗಳೂರು, ಜ.7- ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ಸರ್ಕಾರ ಬದ್ಧವಾಗಿದ್ದು, ತಕ್ಷಣವೇ ಪಾದಯಾತ್ರೆ ಕೈಬಿಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಪಕ್ಷ ಕಾಂಗ್ರೆಸ್ ನಾಯಕರಿಗೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಮೂರನೆ ಅಲೆ ತೀವ್ರವಾಗಿ ಅಪ್ಪಳಿಸುತ್ತಿದ್ದು, ವಿಶೇಷವಾಗಿ ಮಕ್ಕಳ ಮೇಲೆ ದುಷ್ಪರಿಣಾಮ ಬೀರಿದೆ. ಈ ಸಂದರ್ಭದಲ್ಲಿ ಹೆಚ್ಚು ಜನರನ್ನು ಸೇರಿಸಿ ಪಾದಯಾತ್ರೆ ಮಾಡುವುದು ಸರಿಯಲ್ಲ ಎಂದು ಕಿವಿಮಾತು ಹೇಳಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿ ಮತ್ತು ನ್ಯಾಯಾಲಯ ಕೂಡ ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕೂಡಲೇ ನೀವೆಲ್ಲರೂ ಪಾದಯಾತ್ರೆ ಕೈಬಿಡಬೇಕು ಎಂದು ಮನವಿ ಮಾಡಿದ್ದಾರೆ. ನಾವೆಲ್ಲರೂ ಈಗ ಕೊರೊನಾ ಎದುರಿಸಿ ಮುಂಬರುವ ದಿನಗಳಲ್ಲಿ ಮೇಕೆದಾಟು ಯೋಜನೆ ಅನುಷ್ಠಾನ ಕುರಿತು ಒಟ್ಟಾಗಿ ಚರ್ಚಿಸಿ ತೀರ್ಮಾನಿಸೋಣ ಎಂದು ಹೇಳಿದ್ದಾರೆ.
ಸ್ಪಂದಿಸಿದ ವಿಪಕ್ಷ: ಸಿಎಂ ಪತ್ರ ಬರೆಯುತ್ತಿದ್ದಂತೆಯೇ ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು ನಿಲ್ಲಿಸಿದ್ದಾರೆ. ಜನರ ಆರೋಗ್ಯದ ಬಗ್ಗೆ ಸಿಎಂ ಕಾಳಜಿ ತೊರಬೇಕೆಂದು ಮನವಿ ಮೇರೆಗೆ ಒಟ್ಟಾಗಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.