ಶಿಕ್ಷಕರಿಗೆ ಸಿಹಿ ಸುದ್ದಿ: ಕಡ್ಡಾಯವಾಗಿ ಆನ್ಲೈನ್ ಮೂಲಕ 17 ಸೇವಾ ಸೌಲಭ್ಯ ಮಂಜೂರು ಮಾಡಲು ಶಿಕ್ಷಣ ಇಲಾಖೆ ಸೂಚನೆ
ಬೆಂಗಳೂರು: ಆಡಳಿತದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಸರ್ಕಾರಿ ಶಾಲಾ ಶಿಕ್ಷಕರಿಗೆ ನೀಡುವ ಸೇವಾ ಸೌಲಭ್ಯಗಳನ್ನು ಕಡ್ಡಾಯವಾಗಿ ಆನ್ಲೈನ್ ಮೂಲಕವೇ ಮಂಜೂರು ಮಾಡಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಈ ಕುರಿತು ಶಿಕ್ಷಣ ಇಲಾಖೆಯಿಂದ ಸೂಚನೆ ನೀಡಿದ್ದು, ಶಿಕ್ಷಕರು, ಅಧಿಕಾರಿಗಳು, ಸಿಬ್ಬಂದಿ ವರ್ಗದವರಿಗೆ ನಿಯಮಾನುಸಾರ 17 ಸೇವೆಗಳನ್ನು ಕಡ್ಡಾಯವಾಗಿ ಆನ್ಲೈನ್ ಮೂಲಕವೇ ಪ್ರಸ್ತಾವನೆ ಸ್ವೀಕರಿಸಿ ಇತ್ಯರ್ಥಪಡಿಸಬೇಕು.
ಇಇಡಿಎಸ್ ತಂತ್ರಾಂಶ ವರದಿಗಳನ್ನು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸೂಚನೆಯನ್ನು ಪಾಲಿಸದಿರುವುದು ಕಂಡುಬಂದಿದ್ದು, ಭೌತಿಕ ಪ್ರಸ್ತಾವನೆ ಸ್ವೀಕರಿಸುತ್ತಿರುವ ಸಂದೇಹ ವ್ಯಕ್ತವಾಗುತ್ತಿದೆ. ಶಿಕ್ಷಕರು ಸೌಲಭ್ಯಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವಂತಾಗಿದೆ. ಇದರಿಂದ ಬೋಧನಾ ಕಾರ್ಯಗಳಿಂದ ದೂರ ಉಳಿದು ವಿದ್ಯಾರ್ಥಿಗಳ ಕಲಿಕೆಗೆ ಹಿನ್ನಡೆಯಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಆನ್ಲೈನ್ ಮೂಲಕವೇ ಪ್ರಸ್ತಾವನೆ ಸ್ವೀಕರಿಸಿ ಇತ್ಯರ್ಥಪಡಿಸಬೇಕು ಎಂದು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.