ಕನಸು ಕನಸಾಗಿಯೇ ಉಳಿಯುವ ಭಯವಿತ್ತು: ಚೊಚ್ಚಲ ಪಂದ್ಯದಲ್ಲೇ ಮಿಂಚಿದ ಶಿವಂ ಮಾವಿ ಪ್ರತಿಕ್ರಿಯೆ

ಕನಸು ಕನಸಾಗಿಯೇ ಉಳಿಯುವ ಭಯವಿತ್ತು: ಚೊಚ್ಚಲ ಪಂದ್ಯದಲ್ಲೇ ಮಿಂಚಿದ ಶಿವಂ ಮಾವಿ ಪ್ರತಿಕ್ರಿಯೆ

ಟೀಮ್ ಇಂಡಿಯಾದ ಯುವ ವೇಗದ ಬೌಲರ್ ಶಿವಂ ಮಾವಿ ಮೊದಲ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದಾರೆ. ಪದಾರ್ಪಣಾ ಪಂದ್ಯದಲ್ಲಿಯೇ ಮಾವಿ ನಾಲ್ಕು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದು ಭಾರತದ ಗೆಲುವಿನಲ್ಲಿ ನಿರ್ಣಾಯಕ ಪಾತ್ರಹಿಸಿದ್ದಾರೆ. ಈ ಮೂಲಕ ಸ್ಮರಣಿಯ ಆರಂಭ ಪಡೆದುಕೊಂಡಿದ್ದಾರೆ.

ಈ ಭರ್ಜರಿ ಪ್ರದರ್ಶನದ ಬಳಿಕ ಮಾತನಾಡಿದ ಯುವ ವೇಗಿ ಸಂತಸ ಹಂಚಿಕೊಂಡಿದ್ದಾರೆ.

ಭಾರತ ತಂಡದಲ್ಲಿ ಆಡುವ ಕನಸು ಇಂದು ನನಸಾಯಿತು ಎಂದಿರುವ ಮಾವಿ ಅಂಡರ್ 19 ವಿಶ್ವಕಪ್‌ನಲ್ಲಿ ಆಡಿದ 6 ವರ್ಷಗಳ ಬಳಿಕ ಈ ಅವಕಾಶ ದೊರೆತಿದೆ ಎಂದು ತಮ್ಮ ಹಾದಿಯನ್ನು ನೆನಪಿಸಿಕೊಂಡಿದ್ದಾರೆ. "ಅಂಡರ್ 19 ವಿಶ್ವಕಪ್‌ನಲ್ಲಿ ಆಡಿದ ಬಳಿಕ ರಾಷ್ಟ್ರೀಯ ತಂಡದಲ್ಲಿ ಅವಕಾಶ ಪಡೆಯಲು ಕಳೆದ 6 ವರ್ಷಗಳಿಂದ ಕಾಯುತ್ತಿದ್ದೆ. ಈ ಅವಧಿಯಲ್ಲಿ ಕೆಲ ಗಾಯಕ್ಕೂ ತುತ್ತಾಗಿದ್ದೆ. ಹೀಗಾಗಿ ಕೆಲ ಸಂದರ್ಭಗಳಲ್ಲಿ ನನ್ನ ಕನಸು ಕನಸಾಗಿಯೇ ಉಳಿದುಕೊಳ್ಳುವ ಆತಂಕವೂ ಎದುರಾಗಿತ್ತು. ಆದರೆ ನನ್ನ ಪ್ರಯತ್ನವನ್ನು ಮುಂದುವರಿಸಿದ್ದೆ" ಎಂದು ಶಿವಂ ಮಾವಿ ಪ್ರತಿಕ್ರಿಯಿಸಿದರು.