ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೀರವನಿತೆ ಒನಕೆ ಓಬವ್ವ ಜಯಂತಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ವೀರವನಿತೆ ಒನಕೆ ಓಬವ್ವ ಜಯಂತಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷ ನೆಹರು ಓಲೇಕಾರ್, ಶಾಸಕ ರಮೇಶ್ ಗೌಡ ಉರುಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಜಗದ್ಗುರು ಚಲವಾದಿ ಮಹಾಸಂಸ್ಥಾನ ಮಠದ ಬಸವನಾಗಿದೇವ ಶರಣರು, ಚಿತ್ತರಗಿ ಇಳಕಲ್ ಶ್ರೀ ವಿಜಯ ಮಹಾಂತೇಶ್ವರ ಶಾಖಾ ಮಠದ ಬಸವಲಿಂಗ ಮಹಾಸ್ವಾಮಿಗಳು ಸೇರಿದಂತೆ ಅನೇಕ ಗಣ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.