'ಕನ್ನಡ ಸಾಹಿತ್ಯ ಸಮ್ಮೇಳ ಲಾಂಛನದಲ್ಲಿ ಕೆಲವೊಂದು ಮಾರ್ಪಾಡು'

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜ. 6,7, 8ರಂದು ಹಾವೇರಿಯಲ್ಲಿ ನಡೆಯಲಿದೆ. ನಗರದ ಆರ್ಟಿಓ ಕಚೇರಿ ಬಳಿ ಇರುವ ಅಜ್ಜಯ್ಯನ ಗುಡಿ ಎದುರಿಗೆ ಸಮ್ಮೇಳನ ನಡೆಸಲು ಸ್ಥಳ ನಿಗದಿ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಶಿ ಹೇಳಿದರು. ಕೆಲವು ದಿನಗಳ ಹಿಂದೆ ಬಿಡುಗಡೆ ಮಾಡಿದ್ದ ಲಾಂಛನದಲ್ಲಿ ಕೆಲವೊಂದು ಮಾರ್ಪಾಡು ಮಾಡಲಾಗಿದೆ. ಭಾವಚಿತ್ರಗಳ ಬದಲು ಜಿಲ್ಲೆಯಲ್ಲಿನ ಐತಿಹಾಸಿಕ ಸ್ಥಳಗಳನ್ನು ಲಾಂಛನದಲ್ಲಿ ಅಳವಡಿಸಲಾಗಿದೆ ಎಂದು ತಿಳಿಸಿದರು.