ಕನ್ನಡ ಸಾಹಿತ್ಯ ಸಮ್ಮೇಳಕ್ಕೆ ಕೋವಿಡ್ ಮುಂಜಾಗ್ರತಾ ಕ್ರಮ ಜಾರಿ - ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ: ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡನೆಯಾಗುತ್ತದೆ. ಈ ಸಂಬಂಧ ಹಣಕಾಸಿನ ಇಲಾಖೆಯೊಂದಿಗೆ ಎರಡು ಸುತ್ತಿನ ಚರ್ಚೆಯಾಗಿದೆ. ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು.ಜನವರಿ ತಿಂಗಳಿನಿಂದ ಬಜೆಟ್ ನ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕರೋನಾ ನಿಯಂತ್ರಣಾ ಕ್ರಮ
ಕರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಉತ್ತರಿಸುತ್ತಾ, ಐಎಲ್ ಐ ಮತ್ತು ಸಾರಿಗಳ ಪರೀಕ್ಷೆ ಹೆಚ್ಚಿಸಲಾಗುವುದು ಹಾಗೂ ಬೂಸ್ಟರ್ ಡೋಸ್ ಗಳನ್ನು ಹೆಚ್ಚಿಸಲಾಗುವುದು. ಆಸ್ಪತ್ರೆಗಳಲ್ಲಿ ಆಕ್ಸಿಜನ್ , ಬೆಡ್ ಗಳು ಸೇರಿದಂತೆ ಮೂಲಭೂತಸೌಕರ್ಯಗಳನ್ನು ಸಜ್ಜುಗೊಳಿಸುವುದು ಹಾಗೂ ಐಸಿಯು ಘಟಕಗಳನ್ನು ಸಿದ್ದಪಡಿಸಿಕೊಳ್ಳುವುದು. ಮಾಸ್ಕ್ ಗಳನ್ನು ಧರಿಸಬೇಕು ಹಾಗೂ ಅಂತರ ಕಾಯ್ದುಕೊಳ್ಳಬೇಕು. ಏರ್ ಪೋರ್ಟ್, ಮತ್ತು ಬಸ್ ನಿಲ್ದಾಣಗಳಲ್ಲಿ ಮೊದಲು ಪಾಲಿಸುತ್ತಿದ್ದ ನಿಯಂತ್ರಣಾ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.