ಕನ್ನಡಕ್ಕೆ ಮೊದಲ ಆದ್ಯತೆ ಕೊಟ್ಟ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ ಚಿತ್ರರಂಗದಲ್ಲಿ ಕೆಲವೇ ವರ್ಷಗಳಲ್ಲಿ ಸಾಕಷ್ಟು ಎತ್ತರಕ್ಕೆ ಬೆಳೆದಿದ್ದಾರೆ. ಇನ್ನು ಅವರು ಸಂಕ್ರಾಂತಿ ಶುಭಾಶಯ ಕೋರಲು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ. ರಶ್ಮಿಕಾ ಸಾಂಪ್ರದಾಯಿಕ ಉಡುಗೆತೊಟ್ಟು ಕೈ ಮುಗಿದಿದ್ದಾರೆ. ಹಲವು ಭಾಷೆಗಳಲ್ಲಿ ರಶ್ಮಿಕಾ ಶುಭಾಶಯ ತಿಳಿಸಿದ್ದಾರೆ. ವಿಶೇಷ ಎಂದರೆ ಅವರು ಮೊದಲು ಕನ್ನಡದಲ್ಲಿ ‘ಸಂಕ್ರಾಂತಿಯ ಶುಭಾಶಯಗಳು’ ಎಂದು ರಶ್ಮಿಕಾ ಬರೆದಿದ್ದಾರೆ. ಆ ಬಳಿಕ ತಮಿಳು, ಹಿಂದಿ, ತೆಲುಗು, ಮಲಯಾಳಂ & ಇಂಗ್ಲಿಷ್ನಲ್ಲಿ ವಿಷ್ ಮಾಡಿದ್ದಾರೆ.